ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಅಕ್ಟೋಬರ್ 09: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗಲಿರುವ ಮುನ್ಸೂಚನೆಯನ್ನು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ.
ಉತ್ತರ ಒಳನಾಡಿನಲ್ಲಿ ಹಗುರ, ಕರಾವಳಿ ವಲಯದಲ್ಲಿ ಸಾಧಾರಣಾ ಮಳೆ ಬೀಳುವ ಸಂಭವವಿರುವುದಾಗಿ ಹೇಳಿದೆ.ಬೆಂಗಳೂರು ನಗರ, ಗ್ರಾಮಾಂತರ,ತುಮಕೂರು,ಚಿತ್ರದುರ್ಗ,ಕೋಲಾರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಯಾದಗಿರಿ, ಬೀದರ್ , ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಲಾಗಿದೆ.

ಮಳೆಯಾದ ಪ್ರದೇಶಗಳು
ಮಂಗಳೂರು, ಸುಬ್ರಹ್ಮಣ್ಯ, ಭದ್ರಾವತಿ, ಮಳವಳ್ಳಿ, ಹುಣಸೂರು, ಆನೇಕಲ್, ಚಾಮರಾಜನಗರ, ಪುತ್ತೂರು, ನಂಜನಗೂಡು, ಯಳಂದೂರು, ಚನ್ನಪಟ್ಟಣ,ಮಂಡ್ಯ , ಭಾಗಮಂಡಲ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ.

ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ
ಅಕ್ಟೋಬರ್ 1ರವರೆಗೆ ದಕ್ಷಿಣ ಕ್ನನಡ, ಉಡುಪಿ, ಉತ್ತರ ಕನ್ನಡ,ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ, 31 ಡಿಗ್ರಿ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳ ಕಾಲ ಇದೇ ಹವಾಮಾನ ಮುಂದುವರೆಯಲಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲ
ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ.












Click it and Unblock the Notifications