Karnataka rains: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆ

ಬೆಂಗಳೂರು, ಮೇ. 21: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆ ಸುರಿದಿದೆ. ಬೆಂಗಳೂರಿನ ಕೆಲವು ಪ್ರದೇಶಗಳು ಭಾರೀ ಮಳೆಗೆ ಸಾಕ್ಷಿಯಾಗಿವೆ. ಇದರ ಜೊತೆಗೆ ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ವರುಣನ ಆರ್ಭಟ ಮುಂದುವರೆಯಲಿದೆ. ಮೇ. 21 ಮತ್ತು ನಾಳೆ (ಮೇ.22) ರಂಉದು ಮಳೆ ಮುಂದುವರೆಯಲಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಮಳೆ ಮುಂದಿನ ಕೆಲವು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಶನಿವಾರ ರಾತ್ರಿ ನಗರದಲ್ಲಿ 25 ಮಿ.ಮೀ ಮಳೆಯಾಗಿದ್ದು, ಉತ್ತರಹಳ್ಳಿ ಭಾಗದಲ್ಲಿ ಮಾತ್ರ 33ಮಿ.ಮೀ ಮಳೆಯಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rains Likely to Continue for Next Few Days In Karnataka

ಭಾನುವಾರ ಕೂಡ ಬೆಂಗಳೂರಿನ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಬೆಂಗಳೂರು ನಗರ, ತುಮಕೂರು, ಕೋಲಾರ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ಬೆಂಗಳೂರಿನ ಮಳೆಯ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ. ಈ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂದಿನ ಪಂದ್ಯದ ಬಗ್ಗೆ ಐಪಿಎಲ್ ಅಭಿಮಾನಿಗಳು ಆತಂಕಗೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭಾನುವಾರ ಸೆಣಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಸಂಜೆಯೂ ಧಾರಾಕಾರ ಮಳೆ ಸುರಿದಿದೆ.

Heavy Rains Likely to Continue for Next Few Days In Karnataka

ಇತ್ತ, ಭಾರೀ ಮಳೆಯಿಂದಾಗಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿತ್ತು. ಕಾರ್ಪೊರೇಷನ್ ಬಳಿ ಬಿಎಂಟಿಸಿ ಬಸ್‌ ಮೇಲೆ ಮರ ಉರುಳಿ ಬಿದ್ದಿದೆ. ಮೆಜೆಸ್ಟಿಕ್, ಕೃಷ್ಣರಾಜ ಮಾರುಕಟ್ಟೆ, ರಾಜಾಜಿನಗರ, ಯಶವಂತಪುರ,ರಿಚ್‌ಮಂಡ್ ರಸ್ತೆ, ನಂಜಪ್ಪ ಸರ್ಕಲ್, ಜೆ.ಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ, ಲಗ್ಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ವ್ಯಾಪಕ ಮಳೆ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+