Heavy Rain: ಇನ್ನು ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ!

Heavy Rain: ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಇನ್ನು ಭಾರತೀಯ ಹವಾಮಾನ ಇಲಾಖೆಯ ತುರ್ತು ಮುನ್ಸೂಚನೆಯ ಪ್ರಕಾರ ಇನ್ನು ಕೆಲವೇ ಕ್ಷಣಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಏನಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದ ವಿವಿಧ ಭಾಗದಲ್ಲಿ ವರುಣಾರ್ಭಟ ಮುಂದುವರಿದಿದೆ. ಇನ್ನು ಮುಂದಿನ ಮೂರು ಗಂಟೆಯ ಅವಧಿಯಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rains to hit these districts in a few moments on June 13th and 14th

ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಾಸವಾಗಲಿದೆ. ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರ - ಮರದ ರಂಬೆ - ಕೊಂಬೆಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೇ ಮುಂದಿನ ಮೂರು ಗಂಟೆಯ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30ರಿಂದ 40 ಕಿ.ಮೀ ವೇಗವನ್ನು ತಲುಪುವ ಬಿರುಗಾಳಿ ಸಹಿತ ಮಿಂಚು - ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ರಿಪೋರ್ಟ್ ವರದಿ ತಿಳಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆ: ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ: ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಎಲೆಕ್ಟ್ರಿಕಲ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗ್ ಮಾಡಿ. ತಕ್ಷಣವೇ ಜಲಮೂಲಗಳಿಂದ ಹೊರ ಬನ್ನಿ. ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನು ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಹಲವು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಸಮಸ್ಯೆ ಆಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ಊರಿಗೆ ಹೋಗುವವರಿಗೆ ಸಮಸ್ಯೆ ಆಗಿದೆ. ಭಾರೀ ಮಳೆಯಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು.

ಧಾರವಾಡದಲ್ಲಿ ಧಾರಾಕಾರ ಮಳೆ: ಇನ್ನು ಹುಬ್ಬಳ್ಳಿ - ಧಾರವಾಡದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಧಾರವಾಡದಲ್ಲಿ ಸುರಿದ ಭಾರೀ ಮಳೆಯಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಕಣ್ಮರೆಯಾಗಿದ್ದು ಅವರ ಹುಡುಕಾಟಕ್ಕೆ ಶೋಧ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+