Heavy Rain: ಕೆಲವೇ ಗಂಟೆಗಳಲ್ಲಿ 6 ದಿನಗಳ ಕಾಲ ಕರ್ನಾಟಕದ ಈ ಭಾಗದಲ್ಲಿ ಭರ್ಜರಿ ಮಳೆ- ಇಲ್ಲಿದೆ ಮಾಹಿತಿ

ಬೆಂಗಳೂರು, ಅಕ್ಟೋಬರ್‌ 23: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆಯಂತೆ ಹಿಂಗಾರು ಮಳೆಯೂ ಸಹ ಜೋರಾಗಿದೆ. . ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗುತ್ತಿದ್ದು, ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rains to many parts of Karnataka for next 6 days

ಕರ್ನಾಟಕದ್ಯಾಂತ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದ್ದು, ಮನೆಗಳು ಕುಸಿದುಬಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಮಳೆರಾಯನ ಆಗಮನದಿಂದಾಗಿ ಭಾರೀ ಅವಾಂತರ ಸೃಷ್ಟಿಸಿದ್ದು, ಜನರು ಮಳೆ ಸಾಕಪ್ಪ ಸಾಕು ಎನ್ನುತ್ತಿದ್ದಾರೆ. ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕೆರೆಗಳಾಂತಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮಾತ್ರವಲ್ಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ ಜೋರಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 6 ದಿನಗಳ ಕಾಲ ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ( ಅಕ್ಟೋಬರ್‌ 24 )ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಅಕ್ಟೋಬರ್‌ 27ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ 245 ಎಂಎಂ ಮಳೆಯಾಗಿದ್ದು, ಇದು ಅತಿ ಹೆಚ್ಚು ಮಳೆಯಾಗಿರುವ ಪೈಕಿ ನಾಲ್ಕನೇ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆಯಾಗುತ್ತಿದು, ಹೈಅಲರ್ಟ್​​ ಘೋಷಿಸಲಾಗಿದ್ದು, ಅಲ್ಲದೇ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+