ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 26ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜೂನ್ 24: ಜೂನ್ 26ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೆರೆಡು ದಿನಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕೊಂಚ ಕಡಿಮೆಯಾಗಲಿದ್ದು,ಜೂನ್ 26ರಿಂದ 258ರ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಜೂನ್ 24ರಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆಜೂನ್ 24ರಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚು ಮಳೆ ಸುರಿಯಲಿದೆ.

Heavy Rains Will Occur In These Districts From June 26 In Karnataka

ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡದ ಕದ್ರಾದಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಾರವಾರ, ಹೊನ್ನಾವರ, ಕಮ್ಮರಡಿ, ಶಿರಾಲಿ, ಉಪ್ಪಿನಂಗಡಿ, ಜಯಪುರ, ಮಂಗಳೂರು, ಸಿದ್ದಾಪುರ, ಹುಂಚದಕಟ್ಟೆ, ಪುತ್ತೂರು, ಮೂಡಬಿದಿರೆ, ಮುಲ್ಕಿ, ಅರಸಳು, ಮಂಚಿಕೆರೆ, ತೀರ್ಥಹಳ್ಳಿ, ಭಾಗಮಂಡಲ, ಎನ್‌ಆರ್‌ಪುರ, ಉಡುಪಿ, ದೊಡ್ಡಬಳ್ಳಾಪುರ, ಗೋಕರ್ಣ, ಸುಳ್ಯ,ದಲ್ಲಿ ಹೆಚ್ಚು ಮಳೆಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Heavy rains are expected in many districts of the Karnataka from June 26, the Met Department said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X