ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆ

|
Google Oneindia Kannada News

ಬೆಂಗಳೂರು, ಜನವರಿ 12 : ವಿಧಾನಪರಿಷತ್ ಚುನಾವಣೆಯ ನಂತರ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 13ರಂದು ಚುನಾವಣೆ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮಂಗಳವಾರದಿಂದಲೇ ಮೂರು ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ರಾಜ್ಯ ಮುಖ್ಯಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ಮಂಗಳವಾರ ದೇವದುರ್ಗ, ಹೆಬ್ಬಾಳ, ಬೀದರ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದರು. ಮೂರು ಕ್ಷೇತ್ರಗಳಲ್ಲೂ ಫೆಬ್ರವರಿ 13ರಂದು ಚುನಾವಣೆ ನಡೆಯಲಿದೆ.[ಹೆಬ್ಬಾಳ ಉಪ ಚುನಾವಣೆ : ಕಾಂಗ್ರೆಸ್ ನಲ್ಲಿ ಟಿಕೆಟ್ ಗೆ ಪೈಪೋಟಿ]

ಜನವರಿ 20ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಜನವರಿ 27 ನಾಮಪತ್ರ ಸಲ್ಲಿಸಲು ಕೊನೆ ದಿನ. ಜನವರಿ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜನವರಿ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. [2013ರ ಚುನಾವಣೆ : ಗೆದ್ದವರು, ಸೋತವರು]

ಹೆಬ್ಬಾಳ ಶಾಸಕ ಜಗದೀಶ್ ಕುಮಾರ್ (ಬಿಜೆಪಿ), ಬೀದರ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ (ಕೆಜೆಪಿ) ಮತ್ತು ದೇವದುರ್ಗ ಶಾಸಕ ವೆಂಕಟೇಶ ನಾಯಕ್ (ಕಾಂಗ್ರೆಸ್) ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಚುನಾವಣೆಯ ವಿವರಗಳು ಚಿತ್ರಗಳಲ್ಲಿ....

ಉಪ ಚುನಾವಣೆ ದಿನಾಂಕ ಘೋಷಣೆ

ಉಪ ಚುನಾವಣೆ ದಿನಾಂಕ ಘೋಷಣೆ

ರಾಜ್ಯ ಮುಖ್ಯಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ಮಂಗಳವಾರ ದೇವದುರ್ಗ, ಹೆಬ್ಬಾಳ, ಬೀದರ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದರು. ಫೆಬ್ರವರಿ 13ರ ಶನಿವಾರ ಮತದಾನ ನಡೆಯಲಿದ್ದು, ಫೆಬ್ರವರಿ 16ರಂದು ಮತ ಎಣಿಕೆ ನಡೆಯಲಿದೆ.

ಜಗದೀಶ್ ಕುಮಾರ್ ನಿಧನದಿಂದ ತೆರವಾದ ಕ್ಷೇತ್ರ

ಜಗದೀಶ್ ಕುಮಾರ್ ನಿಧನದಿಂದ ತೆರವಾದ ಕ್ಷೇತ್ರ

2013ರ ಚುನಾವಣೆಯಲ್ಲಿ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಿಂದ ಜಗದೀಶ್ ಕುಮಾರ್ (ಬಿಜೆಪಿ) ಅವರು 38,162 ಮತಗಳನ್ನು ಪಡೆದು ಜಯಗಳಿಸಿದ್ದರು. 2015ರ ನವೆಂಬರ್ 23ರಂದು ಹೃದಯಾಘಾತದಿಂದಾಗಿ ಅವರು ಮೃತಪಟ್ಟಿದ್ದು, ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಬೀದರ್ ಕ್ಷೇತ್ರಕ್ಕೆ ಉಪ ಚುನಾವಣೆ

ಬೀದರ್ ಕ್ಷೇತ್ರಕ್ಕೆ ಉಪ ಚುನಾವಣೆ

2013ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು 2015ರ ನವೆಂಬರ್ 17ರಂದು ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

ರೈಲು ಅಪಘಾತದಲ್ಲಿ ಮೃತಪಟ್ಟ ವೆಂಕಟೇಶ ನಾಯಕ್

ರೈಲು ಅಪಘಾತದಲ್ಲಿ ಮೃತಪಟ್ಟ ವೆಂಕಟೇಶ ನಾಯಕ್

ರಾಯಚೂರಿನ ದೇವದುರ್ಗ ಕ್ಷೇತ್ರದಲ್ಲಿ ವೆಂಕಟೇಶ ನಾಯಕ್ (ಕಾಂಗ್ರೆಸ್) ಅವರು 2013ರ ಚುನಾವಣೆಯಲ್ಲಿ 62,070 ಮತಗಳನ್ನು ಪಡೆದು ಜಯಗಳಿಸಿದ್ದರು. 2015ರ ಆಗಸ್ಟ್ 24ರಂದು ಆಂಧ್ರಪ್ರದೇಶದ ಮಡಕಶಿರ ಬಳಿ ನಡೆದ ರೈಲ್ವೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.

ಚುನಾವಣಾ ವೇಳಾಪಟ್ಟಿ

ಚುನಾವಣಾ ವೇಳಾಪಟ್ಟಿ

* ಜನವರಿ 20ರಂದು ಚುನಾವಣಾ ಅಧಿಸೂಚನೆ ಪ್ರಕಟ
* ಜನವರಿ 27 ನಾಮಪತ್ರ ಸಲ್ಲಿಸಲು ಕೊನೆ ದಿನ
* ಜನವರಿ 28 ನಾಮಪತ್ರ ಪರಿಶೀಲನೆ
* ಜನವರಿ 30 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಫೆಬ್ರವರ 13 (ಶನಿವಾರ) ಮತದಾನ
* ಫೆಬ್ರವರಿ 16 (ಮಂಗಳವಾರ) ಮತ ಎಣಿಕೆ

English summary
The Election Commission of India announced by election schedule for the Hebbal, Devadurga and Bidar assembly constituencies. Election will be held on February 13, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X