9 ಜಿಲ್ಲೆಯ ಜನತೆಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 02: ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮುಖ್ಯಮಂತ್ರಿ ನೇತೃತ್ವದಲ್ಲಿ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡ್ತೀವಿ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ, ಈ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮುಂದಿನ‌ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Here Are 48 Highlights Of The Cabinet Meeting Chaired By The Siddaramaiah

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು. ಬೆಂಗಳೂರು ಕೇಂದ್ರ ವಿವಿಗೆ "ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ" ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ "ಬೆಂಗಳೂರು ಉತ್ತರ ತಾಲ್ಲೂಕು" ಎಂದು ಬಾಗೇಪಲ್ಲಿಗೆ "ಭಾಗ್ಯನಗರ" ಎಂದು ಹೆಸರಿಡಲಾಗುವುದು. ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು.

ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ. ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು.

ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು. ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ.
ನೀರಾವರಿ ಯೋಜನೆಗಳಿಗೆ - 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+