ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ, ಅಭ್ಯರ್ಥಿಗಳಿಗೆ ಮಾರ್ಗಸೂಚಿಗಳು

ಇಂದಿನಿಂದ (ಮೇ 2) 2017 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು ಮಾರ್ಗಸೂಚಿಯನ್ನು ಸಚಿವ ಬಸವರಾಜ ರಾಯರೆಡ್ಡಿ ಬಿಡುಗಡೆ ಮಾಡಿದ್ದಾರೆ. ಅಭ್ಯರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳು ಇಂತಿವೆ.

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 25: ಇಂದಿನಿಂದ (ಮೇ 02) ಸಿಇಟಿ ಪರೀಕ್ಷೆಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಪರೀಕ್ಷೆ ನಡೆಯಲಿದೆ.

ರಾಜ್ಯಾದ್ಯಂತ ಪರೀಕ್ಷೆಯನ್ನು ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 1,85,411 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. [2017ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ]

Here are the guidelines to Karnataka CET exam - 2017

ಅಭ್ಯರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳು ಇಂತಿವೆ

* ಅಭ್ಯರ್ಥಿಗಳು ಮೇ 3 ರಂದು ಎರಡನೇ ದಿನದ ಕೊನೆಯ ಅವಧಿಯ ಪರೀಕ್ಷೆ ಮುಗಿದ ನಂತರ ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಂದ ಬ್ರೋಚರ್ ಅನ್ನು ಪಡೆದುಕೊಳ್ಳಬೇಕು.

* ಉತ್ತರಗಳನ್ನು ಒಎಂಆರ್ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕು. ಇದಕ್ಕಾಗಿ ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ಬ್ಲೂ ಅಥವಾ ಬ್ಲಾಕ್ ಇಂಕ್ ಬಾಲ್ ಪಾಯಿಂಟ್ ಅನ್ನು ತೆಗೆದುಕೊಂಡು ಹೋಗಬೇಕು.

* ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ ಹಾಗೆಯೇ ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.

* ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಯಾವುದಾದರೂ ಒಂದು ಕಾಲೇಜಿನ ಗುರುತಿನ ಚೀಟಿ, 2ನೇ ಪಿ.ಯು.ಸಿ/12ನೇ ತರಗತಿಯ ಪ್ರವೇಶ ಪತ್ರ, ಬಸ್‍ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‍ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.[ಪಿಯುಸಿ: ಮೌಲ್ಯಮಾಪನ ಆರಂಭವಾಯ್ತು, ಫಲಿತಾಂಶ ಯಾವಾಗ?]

* ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು/ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್/ಮೊಬೈಲ್/ಕ್ಯಾಲ್ಕ್ಯುಲೇಟರ್‍ಗಳನ್ನು ತರುವಂತಿಲ್ಲ.

ಈ ಬಾರಿ ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಮುದ್ರಿಸಲಾಗುತ್ತಿದೆ. ಮೇ 2 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಹಾಗೂ ಮೇ 3 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.

ಹೊರನಾಡು/ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 04-05-2017 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು. ಸುಮಾರು 1,800 ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ ಪರೀಕ್ಷೆಯನ್ನು ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅವುಗಳಲ್ಲಿ 82 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿ ಇವೆ. ಒಟ್ಟು 1,85,411 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಸಿದ್ದಾರೆ. ಅವರಲ್ಲಿ 94,415 ಅಭ್ಯರ್ಥಿಗಳು, ಪುರುಷ ಅಭ್ಯರ್ಥಿಗಳು ಹಾಗೂ 90,996 ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಕ ಮಾಡಿರುತ್ತಾರೆ. ಒಟ್ಟು 404 ವೀಕ್ಷಕರು, 808 ವಿಶೇಷ ಜಾಗೃತ ದಳದ ಸದಸ್ಯರು, 404 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 11,625 ಕೊಠಡಿ ಮೇಲ್ವಿಚಾರಕರು ಹಾಗೂ 32,000 ಅಧಿಕಾರಿ/ಸಿಬ್ಬಂದಿ ವರ್ಗದವರನ್ನು ನೇಮಿಸಲಾಗಿದೆ.

English summary
Higher education minister Basavaraj Rayareddy released guidelines for CET exam 2017. As per the schedule CET exam will commence from May 2nd and end on May 3rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X