Year End 2024: 2024 ರಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ದುರಂತಗಳು ಇಲ್ಲಿವೆ

ಬೆಂಗಳೂರು,ಡಿಸೆಂಬರ್‌ 25: 2024 ರಲ್ಲಿ ಕರ್ನಾಟಕದಲ್ಲಿ ಒಳ್ಳೆಯ ವಿಚಾರಗಳಿಗಿಂತ ಹೆಚ್ಚಾಗಿ ಅನೇಕ ದುರಂತಗಳು ರಾಜ್ಯದಲ್ಲಿ ಸಂಭವಿಸಿವೆ. ರಾಜ್ಯದಲ್ಲಿ ಉಂಟಾದ ನೈಸರ್ಗಿಕ ವಿಕೋಪಗಳಿಂದ ಹಲವು ಕಡೆ ಜನರು ಸಂಕಷ್ಟಕ್ಕೀಡಾಗಿದ್ದು, ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ದುರಂತಗಳಿಂದ ರಾಜ್ಯದ ಜನತೆ ಬೆಚ್ಚಿಬೀಳುವಂತೆ ಮಾಡಿದೆ. ಕರುನಾಡಿನಲ್ಲಿ ಸಂಭವಿಸಿದ ದುರಂತಗಳಿಂದ ಅದೆಷ್ಟು ಸಾವುನೋವುಗಳು ಸಂಭವಿಸಿವೆ.

2024 ರಲ್ಲಿ ಹೆಚ್ಚು ಮಳೆಯಿಂದಾಗಿ ಬೆಳೆ ಹಾನಿ ಜೊತೆಗೆ ಹಲವು ಕಡೆ ಸಾವು ನೋವುಗಳು ಸಂಭವಿಸಿದೆ. ಈ ವರ್ಷ ರಾಜ್ಯದಲ್ಲಿ ಎರಡ್ಮೂರು ಭಾರೀ ಭರ್ಜರಿ ಮಳೆಯಾಗಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳು ಎರಡ್ಮೂರು ಭಾರೀ ತುಂಬಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ವರುಣಾರಾಯನ ಆಗಮನದಿಂದ ರಾಜ್ಯದ ರೈತ ವರ್ಗ ಸಂತಸದಲ್ಲಿತ್ತು. ಆದರೆ,ಕೆಲವು ಕಡೆ ಹೆಚ್ಚು ಮಳೆಯಿಂದಾಗಿ ರಾಜ್ಯದ ಕೆಲ ಭಾಗಗಳಲ್ಲಿ ಜನತೆ ಸಂಕಷ್ಟಕ್ಕೆ ಸಿಲುಕಿಕೊಳ್ಳುವಂತಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ ಕುಸಿತದಿಂದ 11 ಜನ ಮೃತಪಟ್ಟಿದ್ದರು.

Here are the tragedies that happened in Karnataka in 2024

ಇನ್ನೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೇ ತಿಂಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಬಾಣಂತಿಯರು ಸಾವಿನ ಪ್ರಕರಣದ ಕುರಿತು ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆಕ್ರೋಶವನ್ನ ಹೊರಹಾಕಿದ್ರು. ಇದಾದ ಬೆನ್ನಲ್ಲೇ ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಬಾಣಂತಿಯರ ಸಾವಿಗೆ ಸರ್ಕಾರ ಕಾರಣ ಎಂದು ವಿಪಕ್ಷಗಳು ಆರೋಪ ಮಾಡಿವೆ. ಇನ್ನು, ಸರ್ಕಾರ ಮೃತ ಬಾಣಂತಿಯರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನಲ್ಲಿ ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನರು ನೀರುಪಾಲಾಗಿದ್ದರು. ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿತ್ತು. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದರು. ಇಬ್ಬರು ಈಜಿಕೊಂಡು ಹೋಗಿ ದಡ ಸೇರಿದ್ದರು. ಇನ್ನೂ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದರು. ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೃತಪಟ್ಟಿದ್ದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮುರುಡೇಶ್ವರಕ್ಕೆ ಪ್ರವಾಸದಲ್ಲಿ ದೊಡ್ಡ ದುರಂತ ಸಂಭವಿಸಿತ್ತು. ಸುಮಾರು 54 ವಿದ್ಯಾರ್ಥಿನಿಯರು ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಆ ವೇಳೆ ಅಲೆಗಳ ಅಬ್ಬರ ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಟ ಆಡಲು ಬಿಟ್ಟಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರುಪಾಲಾಗಿದ್ದರು. ಈ ಸಂದರ್ಭದಲ್ಲಿ ಮೂರು ಜನ ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕನನ್ನು ರಕ್ಷಣೆ ಮಾಡಿದ್ದರು. ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದರು.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+