Government Employees : ಸರ್ಕಾರಿ ನೌಕರರ ಗಮನಕ್ಕೆ: ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಮಹತ್ವದ ಅಪ್‌ಡೇಟ್‌

ಬೆಂಗಳೂರು, ಮೇ29: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳಿಗೆ ಮಾರ್ಪಾಡು ಮಾಡುವ ಬಗ್ಗೆ ಮಹತ್ವ ಮಾಹಿತಿ ಇಲ್ಲಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಉಲ್ಲೇಖಿತ ಸುತ್ತೋಲೆಯನ್ವಯ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಲಾಗಿದೆ. ಆದರೆ, ತಾಂತ್ರಿಕ ತೊಂದರೆಯಿಂದಾಗಿ ನಿಗದಿತ ಅವಧಿಯೊಳಗೆ ನೌಕರರು ನೋಂದಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಸಾಧ್ಯವಾಗದೇ ಇರುವುದರಿಂದ ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಆದ್ದರಿಂದ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಾರ್ಪಾಡು ಸುತ್ತೋಲೆ ಹೊರಡಿಸಲು ತಮ್ಮಲ್ಲಿ ಕೋರಿದೆ.

Here Is Important Information About Karnataka Arogya Sanjeevini Yojana

ಮಾರ್ಪಾಡು ಮಾಡಬೇಕಾಗಿರುವ ಸೂಚನೆಗಳು ಇಲ್ಲಿವೆ

ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿ:20-06-2025ರೊಳಗೆ ಘೋಷಣೆಯನ್ನು ತನ್ನ ಮೇಲಾಧಿಕಾರಿಗಳ ಮೂಲಕ ಡಿ.ಡಿ.ಓ. ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ಜೂನ್-2025ರ ಮಾಹೆಯಿಂದ ಸ್ವಯಂಚಾಲಿತವಾಗಿ ಹೆಚ್.ಆರ್.ಎಂ.ಎಸ್.ನಲ್ಲಿ ಕಟಾಯಿಸಲಾಗುವುದು ಎಂದು ಮಾರ್ಪಾಡು ಮಾಡುವುದು.

ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿರುವ ಆತನ ತಂದೆ ಅಥವಾ ತಾಯಿ(ಮಲತಾಯಿಯನ್ನೊಳಗೊಂಡಂತೆ) ಅವರು ಇತರೆ ಯಾವುದೇ ಆರೋಗ್ಯ ಸೌಲಭ್ಯಕ್ಕೆ ಒಳಪಟ್ಟಿರಬಾರದು ಹಾಗೂ ಒಬ್ಬರ ಅಥವಾ ಇಬ್ಬರ ಮಾಸಿಕ ಆದಾಯ ರೂ 27,000 ಗಳಿಗೆ ಮೀರಿರಬಾರದು ಎಂದು ಮಾರ್ಪಡಿಸುವುಸು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+