SSLC Exam 2025: SSLC ಪರೀಕ್ಷೆ ಬರೆಯುವ ಮಕ್ಕಳು ಈ ನಿಯಮ ಪಾಲನೆ ಮಾಡುವುದು ಕಡ್ಡಾಯ: ಮಹತ್ವ ಆದೇಶ

ಬೆಂಗಳೂರು, ಮಾರ್ಚ್‌ 18: ಎಸ್‌ಎಸ್‌ಎಲ್‌ಸಿ(SSLC) ವಿದ್ಯಾಭ್ಯಾಗ ಮಾಡುತ್ತಿರುವ ಮಕ್ಕಳಿಗೆ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಅಪ್‌ಡೇಟ್‌ ಒಂದಾನ್ನ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಮಾರ್ಚ್‌ 21 ನೇ ತಾರೀಕಿನಿಂದ ಪರೀಕ್ಷೆ ಆರಂಭವಾಗಲಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಹೆಚ್ಚಿನ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಇನ್ನು SSLC ಪರೀಕ್ಷೆ ಆರಂಭ ಆಗಲಿದೆ, ಈ ನಡುವೆ ರಾಜ್ಯ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಇನ್ನೊಂದು ಸೂಚನೆ ನೀಡಿದೆ ಮತ್ತು SSLC ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳು ಈ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಈಗಾಗಲೇ ಕರ್ನಾಟಕ ಪರೀಕ್ಷಾ ಮಂಡಳಿ ಸಕಲ ಸಿದ್ದತೆಯನ್ನ ಮಾಡಿಕೊಂಡಿದೆ.ಮಾರ್ಚ್‌ 21 ನೇ ತಾರೀಕಿನಿಂದ ಏಪ್ರಿಲ್ 4 ನೇ ತಾರೀಕಿನ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ಇನ್ನು SSLC ಪರೀಕ್ಷೆ ನಡೆದ ಪರೀಕ್ಷಾ ಕೇಂದ್ರದ 200 ಮೀಟರ್ ದೊರದ ತನಕ ಸುರಕ್ಷತಾ ಕ್ರಮ ಕೂಡ ಕೈಕೊಳ್ಳಲಾಗಿದೆ ಮತ್ತು ಸಕಲ ಭದ್ರತೆಯಲ್ಲಿ ಪೋಲೀಸರ ಸುರಕ್ಷತೆಯಲ್ಲಿ SSLC ನಡೆಯಲು ಈಗ ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ.

Here Is Information About The Rules SSLC Students Must Follow

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾದ ದಿನದಿಂದ ಪರೀಕ್ಷಾ ಕೇಂದ್ರದ 200 ಮೀಟರ್ ದೂರದ ತನಕ ಯಾವುದೇ ಜೆರಾಕ್ಸ್ ಕೇಂದ್ರಗಳು ತೆರೆಯದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷೆ ನಡೆಯುವ ನಡೆಯುವ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಅಥವಾ ಗುಂಪು ಬರದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು. ಇದು ಪರೀಕ್ಷಾ ಕೇಂದ್ರದ ಹೊರಗೆ ಪಾಲಿಸಬೇಕಾದ ನಿಯವಾದರೆ ಪರೀಕ್ಷಾ ಕೇಂದ್ರದ ಒಳಗೆ ಕೂಡ ಕೆಲವು ನಿಯಮ ಪಾಲಿಸಬೇಕು.

ರಾಜ್ಯದಲ್ಲಿ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸಬರು, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

* ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ

* ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ

* ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.

* ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ

* ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.

ಮಹತ್ವದ ಸೂಚನೆಗಳು

1. 05.04.2025 (2) 28... (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.

2. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.

3. ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

4. ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.

5. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ ಅವಧಿ ನಿಗದಿಪಡಿಸಿದೆ.

6. ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

7. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ.

8. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+