Get Updates
Get notified of breaking news, exclusive insights, and must-see stories!

SM Krishna Death: ಕರ್ನಾಟಕದಲ್ಲಿ ನಾಳೆ ಬ್ಯಾಂಕ್‌ಗಳಿಗೆ ರಜೆ ಇದೆ? ಇಲ್ಲಾ? ಇಲ್ಲಿದೆ ವಿವರ

ಬೆಂಗಳೂರು, ಡಿಸೆಂಬರ್‌ 10: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿರಾಗಿದ್ದ, ಮಹಾರಾಷ್ಟ್ರ ರಾಜ್ಯಪಾಲರಾಗಿ ಭಾರತದ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ರಾಜಕಾರಣ ಎಸ್‌.ಎಂ. ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು( ಡಿಸೆಂಬರ್‌ 10) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರಿಗೆ ಗೌರವ ನೀಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಅಂದರೆ ಡಿಸೆಂಬರ್‌11ರಂದು ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ ಅಲ್ಲದೇ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಇದರಿಂದ ಮತ್ತೊಂದು ಗೊಂದಲ ಸೃಷ್ಟಿಯಾಗಿದೆ. ನಾಳೆ ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ ಖಚಿತವಾಗಿದ್ದು, ರಾಜ್ಯದ ಬ್ಯಾಂಕ್‌ಗಳಿಗೆ ರಜೆ ಇದೆಯಾ ಎನ್ನುವ ಪ್ರಶ್ನೆ ಎದುರಾಗಿದೆ.

Here Is The Clarity Whether There Will Be A Holiday For Banks Tomorrow In Karnataka Or Not

ಸದ್ಯದ ಮಾಹಿತಿ ಪ್ರಕಾರ ನಾಳೆ ರಾಜ್ಯದ ಬ್ಯಾಂಕ್‌ಗಳಿಗೆ ರಜೆ ಇಲ್ಲ. ಬ್ಯಾಂಕು ರಜೆ ಬಗ್ಗೆ ಆರ್​ಬಿಐನಿಂದ ಯಾವುದೇ ಪ್ರಕಟಣೆ ಈವರೆಗೂ ಬಂದಿಲ್ಲ. ಸಾಮಾನ್ಯವಾಗಿ ಬ್ಯಾಂಕ್​ನ ರಜಾ ದಿನಗಳನ್ನು ಆರ್​ಬಿಐ ನಿಗದಿ ಮಾಡುತ್ತದೆ. ಹೀಗಾಗಿ ಆರ್​ಬಿಐನಿಂದ ಯಾವುದೇ ಪ್ರಕಟಣೆ ಬರದ ಕಾರಣ ರಾಜ್ಯದ ಬ್ಯಾಂಕ್‌ಗಳಿಗೆ ರಜೆ ಇಲ್ಲ. ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎನ್ನುವುದು ಸದ್ಯದ ಮಾಹಿತಿಯಾಗಿದೆ.

ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ಇರುವುದೇನು..?

ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ, ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.

Here Is The Clarity Whether There Will Be A Holiday For Banks Tomorrow In Karnataka Or Not

ದಿವಂಗತರ ಅಂತ್ಯಕ್ರಿಯೆಯನ್ನು ಬುಧವಾರದಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ: 11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ದಿನಾಂಕ: 10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+