Gruha Lakshmi Scheme: 16 ನೇ ಕಂತಿನ ಗೃಹಲಕ್ಷ್ಮಿ ಹಣ ಯಾವಾಗ ಜಮಾ? ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬ್ರವರಿ 15: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಷಿಸಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಂತ ಹಂತವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ, ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವ ಮಹತ್ವದ ಯೋಜನೆಯಾಗಿದೆ.

ಕಾಂಗ್ರೆಸ್‌ ಸರ್ಕಾರ ಮಹಿಳಾ ಸಬಲೀಕರಣ ಮತ್ತು ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತರಲಾದ ಈ ಯೋಜನೆ ಅನೇಕ ಕುಟುಂಬಗಳಿಗೆ ಆರ್ಥಿಕ ಸುರಕ್ಷತೆ ಒದಗಿಸಿದೆ. ಆರಂಭದಿಂದಲೂ ಗೃಹ ಲಕ್ಷ್ಮಿ ಯೋಜನೆ ಹಲವು ಅಡೆತಡೆಗಳನ್ನು ಎದುರಿಸಿದ್ದರೂ, ಯೋಜನೆಯ ಹಣವನ್ನು ನಿಯಮಿತವಾಗಿ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಅನೇಕ ಫಲಾನುಭವಿಗಳಿಗೆ ಹಣ ಜಮಾ ಆಗದಿರುವುದು, ಮಹಿಳೆಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

Here Is The Information About Release Of The 16th Installment Of Gruhalakshmi Money

ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿದ್ದು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ
ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇತ್ತ ಹಲವಾರು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ 16 ಕಂತಿನ ಹಣ ಜನವರಿ 14 ರಂದು ಬಿಡುಗಡೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದರು. ಆದರೆ, ಹಲವು ಅಡೆತಡೆಗಳಿಂದ ಹಣ ಬಿಡುಗಡೆಯಾಗಿರಲಿಲ್ಲ. ಇದೀಗ 16 ಹಾಗೂ 17 ನೇ ಕಂತಿ ಹಣ ಯಾವಾಗ ಎನ್ನುವ ಕುರಿತು ಮಾಹಿತಿ ಲಭ್ಯವಾಗಿದೆ. , ಪೆಂಡಿಂಗ್ ಇರುವ ಹಣ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮಾಹಿತಿಯ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ 15ನೇ ಕಂತಿನ ಹಣ ಈಗಾಗಲೇ ಜಮಾ ಮಾಡಲಾಗಿದೆ, ಆದರೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಈ ಹಣ ತಲುಪಿಲ್ಲ. ಸರ್ಕಾರದ ಮೂಲಗಳ ಪ್ರಕಾರ, ಫೆಬ್ರವರಿ 25 ರೊಳಗೆ 16 ನೇ ಕಂತಿನ ಹಣ ಜಮಾ ಆಗಲಿದ್ದು, ಎಲ್ಲ ಫಲಾನುಭವಿಗಳಿಗೆ ಪೂರ್ಣವಾಗಿ ಹಣ ಜಮಾ ಮಾಡಲು ಸರ್ಕಾರ ಯೋಜನೆ ರೂಪಿಸಿದೆ ಎಂದು ತಿಳಿದು ಬಂದಿದೆ.

ಇನ್ನೂ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಬಾಕಿ ಉಳಿದಿರುವ ಕಂತಿ ಹಣ ಬಿಡುಗಡೆಯ ಕೆಲಸ ಬೇಗ ಆಗಲಿದೆ. 16ನೇ ಮತ್ತು 17ನೇ ಕಂತಿನ ಹಣವನ್ನು ಕೂಡ ಹಂತ ಹಂತವಾಗಿ ಬಿಡುಗಡೆ ಮಾಡಲು ಸರ್ಕಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸಿದೆ. ಈ ತಿಂಗಳ ಕೊನೆಯಲ್ಲಿ 16ನೇ ಕಂತಿನ ಜೊತೆಗೆ 17 ನೇ ಕಂತಿನ ಹಣ ಖಾತೆಗೆ ಜಮಾ ಆಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+