Gruha Lakshmi Scheme: ಜನವರಿ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಯಾವಾಗ? ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು, ಮಾರ್ಚ್‌ 13: ರಾಜ್ಯ ಕಾಂಗ್ರೆದ್‌ ಸರ್ಕಾರ ಮೂರು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಬಹಿರಂಗವಾಗಿದೆ ಅಸಮಾಧಾನ ಹೊರಹಾಕಿದ್ದರು. ಇದೀಗ ಸರ್ಕಾರ 16 ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು, ಜನವರಿ ತಿಂಗಳ ಹಣವನ್ನ ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಬಾಕಿ ಇರುವಂತ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ನಾಳೆ ಅಥವಾ ನಾಡಿದ್ದು ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶೀಘ್ರದಲ್ಲಿಯೇ ಜನವರಿ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಹಣವನ್ನ ಯಾವಾಗ ಖಾತೆ ಜಮಾ ಮಾಡಲಿದೆ ಎಂದು ಮನೆ ಯಜಮಾನಿಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಜನವರಿ ತಿಂಗಳ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

Here Is The Information About The Release Of Gruha Lakshmi Money For Month Of January

ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ. ಅದರಲ್ಲೂ ಪಿಎಸ್‌ ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ ಖರೀದಿ, ಹೀಗೆ ಸಾಕಷ್ಟು ಹಗರಣಗಳು ನಡೆದಿದ್ದು, ಇವೆಲ್ಲದರ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರು ಸಮಗ್ರ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಒಪ್ಪಿಸಿದ್ದಾರೆ. ವರದಿಯು ಸಚಿವ ಸಂಪುಟದ ಮುಂದೆ ಚರ್ಚೆ ಆಗಲಿದೆ. ಮುಖ್ಯಮಂತ್ರಿಯವರು ಮತ್ತು ಸಚಿವ ಸಂಪುಟ ಮುಂದೆ ನಿರ್ಧಾರ ಕೈಗೊಳ್ಳುತ್ತದೆ, ಅದರ ಮೇಲೆ ಕ್ರಮ ಆಗಲಿದೆ ಎಂದು ಹೇಳಿದರು.

ಚಿತ್ರ ನಟಿ ರನ್ಯಾ ರಾವ್‌ ಕೇಸ್ ಸಿಐಡಿ ವಿಚಾರಣೆ ವಾಪಸ್ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಟಿ ರನ್ಯಾ ರಾವ್‌ ಕೇಸಿನ ಬಗ್ಗೆ ಮಾಧ್ಯಮದವರು (ನೀವು) ಏನ್ನೆಲ್ಲ ತೋರಿಸುತ್ತಿದ್ದೀರೋ ಅಷ್ಟೇ ನಮಗೆ ಗೊತ್ತು. ನನ್ನ ಇಲಾಖೆಯಲ್ಲೇನು ಇಂಟೆಲಿಜೆನ್ಸಿ ಇಲ್ಲ. ಮುಖ್ಯಮಂತ್ರಿಯವರು ಮತ್ತು ಗೃಹಮಂತ್ರಿಯವರಿಗೆ ಈ ಪ್ರಕರಣದ ಬಗ್ಗೆ ಸವಿಸ್ತಾರವಾಗಿ ಗೊತ್ತು. ಈ ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ದರೂ ಕೂಡ ತನಿಖೆಯಿಂದ ಹೊರಬೀಳುತ್ತದೆ. ನಂತರದಲ್ಲಿ ಏನೆಲ್ಲ ಕ್ರಮ ಎನ್ನುವುದು ನಿರ್ಧಾರವಾಗುತ್ತದೆ ಎಂದರು.

ಈ ಅವಧಿ ನಾನೇ ಪೂರ್ಣಗೊಳಿಸುವೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಪಕ್ಷದ ಹಿರಿಯ ನಾಯಕರು, ದೊಡ್ಡ ಮಾಸ್‌ ಲೀಡರ್‌. ಅವರು ನಮ್ಮ ಸರ್ಕಾರವನ್ನು ಬಹಳ ಚೆನ್ನಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅವರು ಏನು ಮಾತನಾಡುತ್ತಾರೆಯೋ ಅದು ನಮಗೆ ಆಶೀರ್ವಾದ ಎಂದು ಸಚಿವರು ಹೇಳಿದರು.

ಮುಸ್ಲಿಮರು ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿರುವ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ನಾವು ಪಂಚಮಸಾಲಿಗಳು 2ಎ ಕೇಳುತ್ತಿದ್ದೇವೆ. ಬೇರೆಯವರು ಬೇರೆ ಮೀಸಲಾತಿ ಕೇಳುತ್ತಿದ್ಧಾರೆ. ಕೇಳುವಂತಹ ಅಧಿಕಾರ, ಹಕ್ಕು ಎಲ್ಲರಿಗೂ ಇರುತ್ತದೆ ಎಂದು ಸಚಿವರು ಹೇಳಿದರು.

ಬಾಗಲಕೋಟೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ನನಗೆ ಚಾಮರಾಜನಗರದಲ್ಲಿ ನಡೆದಂತಹ ಘಟನೆ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಕೂಡಲೇ ತುರ್ತು ಕ್ರಮ ವಹಿಸಲಾಗಿತ್ತು. ಆದರೆ, ಬಾಗಲಕೋಟೆಯಲ್ಲಿ ಮಗು ಸಾವನ್ನಪ್ಪಿರುವ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡುವುದಾಗಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+