Suraj Revanna : ಸೂರಜ್ ಅಮಾವಾಸ್ಯೆ ದಿನ ಬಳೆ ತೊಟ್ಟು , ಸೀರೆ ಉಡ್ತಾನೆ; ಬೆಚ್ಚಿಬೀಳುವಂತೆ ಸಂತ್ರಸ್ತ ಯುವಕ ಹೇಳಿದ್ದೇನು?
ಬೆಂಗಳೂರು, ಜೂನ್ 25: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ರೇವಣ್ಣ ಅವರ ಕುರಿತು ಜೆಡಿಎಸ್ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕರು ಬೆಚ್ಚಿಬೀಳುವಂತ ಮಾಹಿತಿ ನೀಡಿದ್ದಾರೆ.
ಖಾಸಗಿ ಸುದ್ಧಿ ವಾಹಿನಿಯನ್ನ ಹಾಸನದ ಸಂತ್ರಸ್ತ ಯುವಕರು ಸಂದರ್ಶನದಲ್ಲಿ ಮಾತನಾಡಿದ್ದು, ಅಮಾವಾಸ್ಯೆಗೆ ಬಳೆ ತೊಟ್ಟು,ಸೀರೆ ಉಡ್ತಾರೆ ಅಂತ ಇದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. 2019 ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನ ಭೇಟಿ ಮಾಡಿದ್ದೆ. ಅರಕಲಗೂಡಿನಲ್ಲಿ ಜೆಡಿಎಸ್ ಕಾರ್ಯಕ್ರಮ ಜೋರಾಗಿ ಮಾಡಿದ್ದೇ. ಈ ವೇಳೆ ಕಾರ್ಯಕ್ರಮ ಚನ್ನಾಗ್ ಮಾಡಿದಿಯಾ ಅಂತ ನನ್ನ ಹೋಗಳಿ ನನ್ನ ನಂಬರ್ ಅವನ್ನ ಅವರೇ ತೆಗೆದಿಕೊಳ್ಳುತ್ತಾರೆ. ನಂತರ ಅವರ ವಿಸಿಟಿಂಗ್ ಕಾರ್ಡ್ ಕೊಡ್ತಾರೆ,ನಂತರ ಅವರು ನನ್ನ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದರು.

ಇನ್ನೂ ಸೂರಜ್ ರೇವಣ್ಣ ಎರಡು ತರ. ಅವರು ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ವಿರುದ್ಧವಾಗಿ ಒಳಗಡೆ ಇರುತ್ತಾರೆ , ಸೂರಜ್ ರೇವಣ್ಣ ಕಾಮುಕ, ಹೊರಗೆ ಒಂದು ಮುಖ, ಒಳಗೆ ಇನ್ನೊಂದು ಮುಖ. ನಾಲ್ಕು ವರ್ಷದಿಂದ ಎಲ್ಲೂ ಹೇಳಿಕೊಳ್ಳೋಕೆ ನನಗೆ ಆಗಿರಲಿಲ್ಲ, ಮನಸ್ಸಿನಲ್ಲಿ ಕಾಡುತ್ತಿತ್ತು.
ಒಂದು ದಿನ ನನ್ನ ಜೊತೆಗೆ ಸೂರಜ್ ರೇವಣ್ಣ ಬಂದು ನನ್ನ ಜೊತೆಗೆ ಮಾತ್ನಾಡುತ್ತಾ ನನ್ನ ಜೀವನ ಹೇಗೆ ಏನು ಅಂತ ಎಲ್ಲಾ ಕೇಳಿದ್ರು, ನಾನು ನನ್ನ ಕೆಲಸ, ಕುಟುಂಬದ ಬಗ್ಗೆ ಹೇಳಿದೆ. ಯಾವುದಕ್ಕೂ ಯೋಚನೆ ಮಾಡಬೇಡ ನಾನು ಇದ್ದೇನೆ ಎಂದು ಹೇಳಿ. ರೂಮ್ ಒಳಗೆ ಕರೆದುಕೊಂಡು ಹೋದ್ರು. ನಂತರ ನನ್ನ ಕಾಲು ಒತ್ತುವಂತೆ ಹೇಳಿದರು. ನಾನು ಕಾಲು ಒತ್ತಿದೆ.. ಮುಂದೆ ಏನ್ ಆಯ್ತು ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದು ಸಂತ್ರಸ್ತ ಯುವಕ ವಿವರಿಸಿದ್ದಾರೆ.
Good Evening ಮೆಸೇಜ್ ಜತೆ ಲವ್ ಸಿಂಬಲ್
ಸೂರಜ್ ರೇವಣ್ಣ ಅವರು Good Evening ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ ಜೆಡಿಎಸ್ ಕಾರ್ಯಕರ್ತರ ಹೇಳಿದ್ದಾರೆ.
ಇನ್ನೂ ಪೊಲೀಸ್ ವಿಚಾರಣೆ ವೇಳೆ ಹಾಗೂ ದೂರು ಪ್ರತಿಯಲ್ಲಿ ಘಟನೆನ್ನು 27 ವರ್ಷದ ಸಂತ್ರಸ್ತ ವಿವರಿಸಿದ್ದಾರೆ. ''ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪರಿಚಯವಾಗಿದ್ದ ಸೂರಜ್ ರೇವಣ್ಣ ಪಕ್ಷದ ಚಟುವಟಿಕೆಗಳಲ್ಲಿ ಹೆಚ್ಚು ಸಕ್ರಿಯನಾಗಿದ್ದ ಕಾರಣ ಮೊಬೈಲ್ ನಂಬರ್ ಪಡೆದಿದ್ದರು. ಜೂ.14ರಂದು ಮೊದಲ ಬಾರಿಗೆ ಗುಡ್ ಈವಿನಿಂಗ್ ಸಂದೇಶದ ಜತೆಗೆ ಲವ್ ಸಿಂಬಲ್ ಕಳಿಸಿದ್ದ ಸೂರಜ್ ಮಾತನಾಡಲು ಆರಂಭಿಸಿದ್ದರು.
ಇದಾದ ಬಳಿಕ ಜೂನ್ 16 ರಂದು ಗನ್ನಿಗಡದ ಫಾರ್ಮ್‌ಹೌಸ್ ಒಂಟಿಯಾಗಿ ಬರಲು ತಿಳಿಸಿದ್ದರು. ಅದರಂತೆ ಸಾಯಂಕಾಲ 6.15ರ ಸುಮಾರಿಗೆ ಫಾರ್ಮ್ ಹೌಸ್‌ಗೆ ತೆರಳಿದ್ದ ವೇಳೆ ತನ್ನ ಬೆಡ್ ರೂಂಗೆ ಕರೆದೊಯ್ದ ಸೂರಜ್ ರೇವಣ್ಣ ಬೆದರಿಕೆ ಒಡ್ಡಿ ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬೇಡ ಎಂದು ಗೋಳಾಡಿದರೂ ಸೂರಜ್ ರೇವಣ್ಣ ಬಿಡದೆ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತ ದೂರಿನಲ್ಲಿಆರೋಪಿಸಿದ್ದಾರೆ.
ಇನ್ನೂ ಸೂರಜ್ ರೇವಣ್ಣ ನನ್ನ ಮೇಲೆ ಎಸಗಿದ ಕೃತ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಇದನ್ನು ವಿವರಿಸಿದ್ದಕ್ಕೆ ಈ ವಿಚಾರ ಎಲ್ಲಿಯೂ ಹೇಳದಂತೆ 2 ಕೋಟಿ ರೂ. ಹಾಗೂ ಕೆಲಸದ ಆಮಿಷ ಒಡ್ಡಿದ್ದರು. ಒಪ್ಪದಿದ್ದಕ್ಕೆ ಜೀವಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ದೂರಿದ್ದಾರೆ.












Click it and Unblock the Notifications