Congress Candidates List : ಅಭ್ಯರ್ಥಿ ಆಯ್ಕೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ : ಯಾರ‍್ಯಾರಿಗೆ 'ಕೈ' ಟಿಕೆಟ್?
ಬೆಂಗಳೂರು, ಮಾರ್ಚ್ 19: ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 26 ಹಾಗೂ ಮೇ 7 ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಗೆಲ್ಲುವ ಕುದುರೆಗೆ ಗಾಳ ಹಾಕುತ್ತಿದ್ದು, ಇಂದು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲಿದೆ.
ಕರ್ನಾಟಕದ 28 ಕ್ಷೇತ್ರಗಳ ಫೈಕಿ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯನ್ನ ಕಾಂಗ್ರೆಸ್ ಘೋಷಿಸಿದ್ದು, ಉಳಿದ 21 ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಹಲವು ನಾಯಕರು ಸಭೆ ನಡೆಸಿದ್ದು, ಅಂತಿಮ ಪಟ್ಟಿಯೊಂದಿಗೆ ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಇಂದು (ಮಂಗಳವಾರ) ಬೆಳಗ್ಗೆ 10 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ,ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಜೊತೆಗೆ 21 ಕ್ಷೇತ್ರದ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿ, ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಸಿಇಸಿ ಸಭೆಯ ಅನುಮೋದನೆ ಬಳಿಕ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ.
ಮಂಗಳವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾಗವಹಿಸಿಲಿದ್ದಾರೆ. ಸ್ಕ್ರೀನಿಂಗ್ ಸಮಿತಿ ವರದಿ ಆಧರಿಸಿ ಟಿಕೆಟ್ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದ್ದು, ಬಳಿಕ ಟಿಕೆಟ್ ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ. ತೀವ್ರ ಗೊಂದಲವಿರುವ ಕ್ಷೇತ್ರ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯನ್ನ ಇಂದು ಅಥವಾ ನಾಳೆ ಕಾಂಗ್ರೆಸ್ ಹೈಕಮಾಂಡ್ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
21 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ?
ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಬೆಂಗಳೂರು ಉತ್ತರ - ಪ್ರೊ.ರಾಜೀವ್‌ಗೌಡ
ಬೆಂಗಳೂರು ಸೆಂಟ್ರಲ್ -ಮನ್ಸೂರ್ ಆಲಿ ಖಾನ್
ಕಲಬುರಗಿ -ರಾಧಾಕೃಷ್ಣ ದೊಡ್ಡಮನಿ
ಬಳ್ಳಾರಿ -ವೆಂಕಟೇಶ ಪ್ರಸಾದ್
ಕೋಲಾರ -ಕೆ.ಎಚ್.ಮುನಿಯಪ್ಪ/ ಡಾ.ಎಲ್.ಹನುಮಂತಯ್ಯ
ಚಾಮರಾಜನಗರ -ಸುನಿಲ್ ಬೋಸ್
ಮೈಸೂರು -ಎಂ.ಲಕ್ಷ್ಮಣ್
ಚಿಕ್ಕಮಗಳೂರು- ಉಡುಪಿ -ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ -ಪದ್ಮರಾಜ್
ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ
ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ -ಪ್ರಿಯಾಂಕಾ ಜಾರಕಿಹೊಳಿ
ಹುಬ್ಬಳ್ಳಿ -ಧಾರವಾಡ -ವಿನೋದ್ ಅಸೂಟಿ
ಬಾಗಲಕೋಟೆ -ಸಂಯುಕ್ತ ಪಾಟೀಲ್
ಉತ್ತರಕನ್ನಡ -ಅಂಜಲಿ ನಿಂಬಾಳ್ಕರ್
ದಾವಣಗೆರೆ - ಲತಾ ಮಲ್ಲಿಕಾರ್ಜುನ
ಕೊಪ್ಪಳ -ರಾಜಶೇಖರ ಹಿಟ್ನಾಳ/ ಅಮರೇಗೌಡ ಬಯ್ಯಾಪುರ
ರಾಯಚೂರು -ಜಿ. ಕುಮಾರ ನಾಯ್ಕ್
ಬೀದರ್ - ರಾಜಶೇಖರ ಪಾಟೀಲ/ ಸಾಗರ್ ಬಿ. ಖಂಡ್ರೆ












Click it and Unblock the Notifications