ಕರ್ನಾಟಕದಲ್ಲಿ ಫೆ.10ರ ವರೆಗೆ ಹೇಗಿರಲಿದೆ ವೆದರ್ ಇಲ್ಲಿದೆ ರಿಪೋರ್ಟ್

ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಎರಡು ವಾರಗಳ ಹಿಂದೆ ತೀವ್ರ ಚಳಿ ಹಾಗೂ ಮುಂಜಾನೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರುತ್ತಿತ್ತು. ಆದರೆ, ತೀವ್ರ ಚಳಿ ನಿಧಾನವಾಗಿ ಕಡಿಮೆಯಾಗುತ್ತಿದ್ದು ಬಿಸಿಲು ಹೆಚ್ಚಾಗುತ್ತಿದೆ. ಹೌದು ರಾಜ್ಯದ ವಿವಿಧ ಭಾಗದಲ್ಲಿ ಚಳಿ ಪ್ರಮಾಣ ಇಳಿಕೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆಗಿಂತ ಮುಂಚೆಯೇ ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗುತ್ತಿದೆ.

ಬುಧವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ ರಾಜ್ಯದ ಎರಡು ಭಾಗದಲ್ಲಿ ದಾಖಲಾಗಿದೆ. ದಾವಣಗೆರೆ ಹಾಗೂ ಮೈಸೂರಿನ ಲಾಲಿಯಲ್ಲಿ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಬಹುತೇಕ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳ ಹಿಂದಷ್ಟೇ ಕರ್ನಾಟಕದಲ್ಲಿ ಮೈ ಕೊರೆಯುವ ಚಳಿ ಇತ್ತು. ಅದು ಇದೀಗ ಕಡಿಮೆ ಆಗುತ್ತಿದ್ದು ಬಿಸಿಲು ಹೆಚ್ಚಳವಾಗುತ್ತಿದೆ.

Here is Weather Report For Karnataka Till Feb 10th

ಈ ವರ್ಷ ಮಾರ್ಚ್‌ ಅಂತ್ಯದ ವರೆಗೂ ಚಳಿ ಮುಂದುವರಿಯಲಿದೆ. ಫೆಬ್ರವರಿಯಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಲಿದೆ ಎಂದು ಸಹ ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚೆಯನ್ನು ಕೊಟ್ಟಿದ್ದರು. ಆದರೆ, ಹವಾಮಾನದಲ್ಲಿನ ಏರುಪೇರಿನಿಂದಾಗಿ ಈ ಬಾರಿ ಅವಧಿಗಿಂತ ಮುಂಚೆಯೇ ಬೇಸಿಗೆ ಶುರುವಾಗಿದೆ. ರಾಜ್ಯದಲ್ಲಿ ಫೆಬ್ರವರಿ 10ರ ವರೆಗೆ ಯಾವುದೇ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ವಿವಿಧ ಭಾಗದಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಬೆಂಗಳೂರಿನಲ್ಲಿ ಚಳಿ ಕಡಿಮೆಯಾಗುತ್ತಿದ್ದು. ಬಿಸಿಲು ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಫೆಬ್ರವರಿ 10ರ ವರೆಗೆ ಇದೇ ವಾತಾವರಣ ಇರಲಿದೆ.

ತಾಪಮಾನದ ಎಚ್ಚರಿಕೆ: ಕರ್ನಾಟಕದಲ್ಲಿ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ. ಆದರೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವೆದರ್: ಕಳೆದ ವಾರದ ಪ್ರಾರಂಭದಲ್ಲಿ ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ಇತ್ತು. ಇದೀಗ ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಇನ್ನೊಂದು ವಾರ ಬೆಂಗಳೂರಿನಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಭಾಗದಲ್ಲಿ ಬೆಳಿಗ್ಗೆ ಸಮಯದಲ್ಲಿ ದಟ್ಟ ಮಂಜು ಅಥವಾ ಮಂಜು ಬೀಳುವ ಸಾಧ್ಯತೆ ಇದೆ. ಇನ್ನು ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+