ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್, ವಿಶೇಷತೆ ಏನು?
Recommended Video

ಬೆಂಗಳೂರು, ಅಕ್ಟೋಬರ್ 19 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನವೆಂಬರ್ 1ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರ ಪ್ರವಾಸಕ್ಕಾಗಿ ಹೈಟೆಕ್ ಬಸ್ ಸಿದ್ಧವಾಗುತ್ತಿದೆ.
ಅಶೋಕ್ ಲೈಲೆಂಡ್ ಕಂಪನಿಯ ಬಸ್ಸನ್ನು ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸಕ್ಕಾಗಿ ಹೈಟೆಕ್ ಆಗಿ ನಿರ್ಮಾಣ ಮಾಡಲಾಗುತ್ತದೆ. 1 ಕೋಟಿ ರೂ. ವೆಚ್ಚದಲ್ಲಿ ಬಸ್ ಸಿದ್ಧವಾಗುತ್ತಿದೆ. ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಬಸ್ ಬೆಂಗಳೂರಿಗೆ ಬರಲಿದೆ.

ಮೈಸೂರಿನಿಂದ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಜ್ಯ ಪ್ರವಾಸದ ವೇಳೆ ಅವರು ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ.
ಬಸ್ ವಿಶೇಷತೆ ಏನು? : ರಾಜ್ಯ ಪ್ರವಾಸದ ವೇಳೆ ಕುಮಾರಸ್ವಾಮಿ ಅವರು ಬಸ್ಸಿನಲ್ಲಿಯೇ ನಿಂತ ಭಾಷಣ ಮಾಡುವಂತೆ ವಿನ್ಯಾಸಗೊಳಿಸಲಾಗುತ್ತಿದೆ. ಬೆಡ್ ರೂಮ್, ಚಿಕ್ಕ ಮೀಟಿಂಗ್ ಹಾಲ್, ಅಡುಗೆ ಮನೆ, ಶೌಚಾಲಯ ವ್ಯವಸ್ಥೆಯನ್ನು ಬಸ್ ಒಳಗೊಂಡಿದೆ.

ಜುಲೈನಿಂದ ಬಸ್ ವಿನ್ಯಾಸ ಕಾರ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೋಹಿತ್ ಅಲ್ತಾಫ್ ನೇತೃತ್ವದಲ್ಲಿ ಬಸ್ ವಿನ್ಯಾಸ ಕಾರ್ಯ ನಡೆಯುತ್ತಿದೆ. ನವೆಂಬರ್ 1ರಿಂದ ರಾಜ್ಯ ಪ್ರವಾಸ ನಡೆಸುತ್ತೇನೆ ಎಂದು ಕುಮಾರಸ್ವಾಮಿ ಈಗಾಗಲೇ ಘೋಷಿಸಿದ್ದಾರೆ.












Click it and Unblock the Notifications