ಸಿದ್ದರಾಮಯ್ಯ, ಪರಮೇಶ್ವರಗೆ ಹೈಕಮಾಂಡ್ ಬುಲಾವ್
ಬೆಂಗಳೂರು, ಮೇ 17 : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ಕೊಟ್ಟಿದೆ. ಮೇ 21ರಂದು ಉಭಯ ನಾಯಕರು ದೆಹಲಿಗೆ ತೆರಳಲಿದ್ದಾರೆ. ಈ ಭೇಟಿ ಭಾರೀ ಕುತೂಹಲ ಹುಟ್ಟು ಹಾಕಿದೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. ಆದರೆ, ಯಾವ ವಿಚಾರದ ಬಗ್ಗೆ ಚರ್ಚಿಸಲು ಕರೆದಿದ್ದಾರೆ? ಎಂಬುದು ತಿಳಿದಿಲ್ಲ' ಎಂದು ಹೇಳಿದ್ದಾರೆ. [ಸಂಪುಟ ಪುನಾರಚನೆ : ಯಾರ ಕೈ ತಪ್ಪಲಿದೆ ಸಚಿವ ಸ್ಥಾನ?]

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ತಿಂಗಳ ಅಂತ್ಯದಲ್ಲಿ ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ಕರೆ ಬಂದಿರಬಹುದು ಎಂದು ಸುದ್ದಿ ಹಬ್ಬಿದೆ. ['ಸಚಿವ ಸಂಪುಟದಿಂದ ಕೈ ಬಿಟ್ಟರೂ ಸಂತೋಷ']
ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ : ಸಂಪುಟ ಪುನಾರಚನೆ ಬಗ್ಗೆ ಮಾತನಾಡಿರುವ ಡಾ.ಜಿ.ಪರಮೇಶ್ವರ ಅವರು, 'ಸಂಪುಟ ಪುನಾರಚನೆ ಮಾಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರು ಯಾವಾಗ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧವಾಗಿರುತ್ತೇನೆ' ಎಂದು ಹೇಳಿದ್ದಾರೆ. [4 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಘೋಷಣೆ]
ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ? : ಜೂನ್ 9ರಂದು 4 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಜೂನ್ 11ರಂದು ನಾಲ್ವರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.











Click it and Unblock the Notifications