ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆಗೆ ಖರ್ಗೆ ಪ್ರವೇಶ; ಹೈಕಮಾಂಡ್‌ ಅಂತಿಮ ತೀರ್ಮಾನ

|
Google Oneindia Kannada News

ಬೆಂಗಳೂರು, ಜನವರಿ 08 : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಜೂನ್‌ನಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

" ರಾಜ್ಯಸಭಾ ಚುನಾವಣೆಗೆ ಸ್ಫರ್ಧೆ ಮಾಡುವ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳಬೇಕಿದೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಭಾವವನ್ನು ಖರ್ಗೆ ಹೊಂದಿದ್ದು, ಆಯ್ಕೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.

 ಮತ್ತೆ ಚುನಾವಣಾ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ ಮತ್ತೆ ಚುನಾವಣಾ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ

"ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಏನನ್ನೂ ಕೇಳುವುದಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುವೆ" ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.

ರಾಜ್ಯಸಭಾ ಉಪ ಚುನಾವಣೆ; ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ? ರಾಜ್ಯಸಭಾ ಉಪ ಚುನಾವಣೆ; ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ?

High Command To Decide On Enter Rajya Sabha Mallikarjun Kharge

ಲೋಕಸಭೆ ಕಾಂಗ್ರೆಸ್ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋಲು ಕಂಡಿದ್ದಾರೆ. ಆದ್ದರಿಂದ, ಅವರನ್ನು ರಾಜ್ಯಸಭೆಗೆ ಆರಿಸುವ ಕುರಿತು ಚರ್ಚೆ ನಡೆದಿದೆ.

ಕರ್ನಾಟಕ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಕರ್ನಾಟಕ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಕರ್ನಾಟಕ ವಿಧಾನಸಭೆಯಿಂದ ಒಟ್ಟು 4 ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಸೋತಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸಹ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

English summary
Congress senior leader Mallikarjun Kharge said that party high command to decide whether he should enter the Rajya Sabha or not.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X