ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಸಂಪುಟ ಪುನಾರಚನೆ ಕುರಿತು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ

|
Google Oneindia Kannada News

ಬೆಂಗಳೂರು, ಜ. 11: ಸಂಪುಟ ವಿಸ್ತರಣೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೆಹಲಿಯಿಂದ ತೆರಳಿರುವ ಸಿಎಂ ಯಡಿಯೂರಪ್ಪ ಅವರು ಇಂದು (ಜ.11) ಅಧಿಕೃತ ನಿವಾಸ ಕಾವೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ಸಂಪುಟ ವಿಸ್ತರಣೆ ಮಾಡಬೇಕೊ ಅಥವಾ ಪುನಾರಚನೆ ಮಾಡಬೇಕೊ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕರೆಯಿಸಿಕೊಂಡು ಚರ್ಚಿಸಿ ದಿನವನ್ನು ನಿಗದಿ ಮಾಡುತ್ತೇವೆ.

ಏಳು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಸೂಚಿಸಿದೆ. ಜನವರಿ 13 ಅಥವಾ 14ರಂದು ಪ್ರಮಾಣವಚನ ಕಾರ್ಯಕ್ರಮ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

high command will decide whether to expand or reshuffle cabinet CM BS Yediyurappa

ಸಂಕ್ರಾಂತಿಗೂ ಮುನ್ನ ಸಚಿವಾಕಾಂಕ್ಷಿಗಳಿಗೆ 'ಎಳ್ಳು-ಬೆಲ್ಲ': ಸಂಪುಟ ವಿಸ್ತರಣೆಗೆ ಕೊನೆಗೂ ಒಪ್ಪಿಗೆಸಂಕ್ರಾಂತಿಗೂ ಮುನ್ನ ಸಚಿವಾಕಾಂಕ್ಷಿಗಳಿಗೆ 'ಎಳ್ಳು-ಬೆಲ್ಲ': ಸಂಪುಟ ವಿಸ್ತರಣೆಗೆ ಕೊನೆಗೂ ಒಪ್ಪಿಗೆ

ಸಂಪುಟ ವಿಸ್ತರಣೆ ಕುರಿತು ನಿನ್ನೆ (ಜ.10) ರಂದು ಮೂರನೇ ಬಾರಿ ಹೈಕಮಾಂಡ್ ಭೇಟಿ ಮಾಡಿದ್ದರು. ಎರಡು ಬಾರಿ ಬರಿಗೈಲಿ ಬಂದಿದ್ದ ಯಡಿಯೂರಪ್ಪ ಅವರು, ಈಗ ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುಭಸುದ್ದಿ ತಂದಿದ್ದಾರೆ.

English summary
The high command will decide whether to expand or reshuffle the cabinet Chief Minister BS Yediyurappa said in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X