CM Siddaramaiah: ಇದೇ ಅವಧಿಯಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎಂದ ವೀರಪ್ಪ ಮೊಯ್ಲಿ:ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು, ಮಾರ್ಚ್‌ 03: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಈ ಕುರಿತು ಇಂದು (ಸೋಮವಾರ) ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

High command s decision on CM post is final CM siddaramaiah

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+