ಮಂಗಳೂರು ಗೋಲಿಬಾರ್: ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್
ಬೆಂಗಳೂರು, ಜನವರಿ 15: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ಮತ್ತು ಹಿಂಸಾಚಾರದ ಕುರಿತು ಇದುವರೆಗೆ ತೆಗೆದುಕೊಂಡ ಕ್ರಮಗಳ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಗೋಲಿಬಾರ್ ಪ್ರಕರಣದ ಕುರಿತು ಯಾವುದೇ ನಿರ್ದಿಷ್ಟ ತನಿಖೆ ನಡೆದಿದೆಯೇ? ನಡೆಸಿದ್ದರೆ ಅದರ ವರದಿ ನೀಡಿ ಎಂದು ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ, ಸಾಮಾಜಿಕ ಕಾರ್ಯಕರ್ತರಾಗಿ ತಮ್ಮ ಚಟುವಟಿಕೆಗಳನ್ನು ವಿವರಿಸುವಂತೆ ಮತ್ತು ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು 'ಅಮಾಯಕರು' ಎಂಬ ತೀರ್ಮಾನಕ್ಕೆ ಹೇಗೆ ಬಂದಿದ್ದೀರಿ ಎಂಬುದಕ್ಕೆ ವಿಸ್ತೃತ ಅಫಿಡವಿಟ್‌ನಲ್ಲಿ ಸಲ್ಲಿಸುವಂತೆ ಕೂಡ ಅರ್ಜಿದಾರರಿಗೆ ಸೂಚಿಸಿತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ದೇವಚಲ್ಲ ಗ್ರಾಮ ಮತ್ತು ಗಾಂಧಿ ನಗರದ ನಿವಾಸಿಗಳಾದ ಐಕೆ ಮೊಹಮ್ಮದ್ ಇಕ್ಬಾಲ್ ಎಳಿಮಲೆ ಮತ್ತು ಬಿ ಉಮರ್, ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ಕುರಿತು ವಸ್ತುಸ್ಥಿತಿಯ ವಿವರಗಳನ್ನು ದಾಖಲೆ ಸಹಿತ ಜ. 28ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್, ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಿದೆ. ಈ ಪ್ರಕರಣ ಸಂಬಂಧ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರಿಗೆ ನೋಟಿಸ್ ಜಾರಿ ಮಾಡಿದೆ.
-
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications