ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು ಗೋಲಿಬಾರ್: ಸರ್ಕಾರದಿಂದ ವರದಿ ಕೇಳಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಜನವರಿ 15: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ಮತ್ತು ಹಿಂಸಾಚಾರದ ಕುರಿತು ಇದುವರೆಗೆ ತೆಗೆದುಕೊಂಡ ಕ್ರಮಗಳ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಗೋಲಿಬಾರ್ ಪ್ರಕರಣದ ಕುರಿತು ಯಾವುದೇ ನಿರ್ದಿಷ್ಟ ತನಿಖೆ ನಡೆದಿದೆಯೇ? ನಡೆಸಿದ್ದರೆ ಅದರ ವರದಿ ನೀಡಿ ಎಂದು ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋ: ಪೊಲೀಸರ ದೌರ್ಜನ್ಯ ಸೆರೆಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋ: ಪೊಲೀಸರ ದೌರ್ಜನ್ಯ ಸೆರೆ

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ, ಸಾಮಾಜಿಕ ಕಾರ್ಯಕರ್ತರಾಗಿ ತಮ್ಮ ಚಟುವಟಿಕೆಗಳನ್ನು ವಿವರಿಸುವಂತೆ ಮತ್ತು ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು 'ಅಮಾಯಕರು' ಎಂಬ ತೀರ್ಮಾನಕ್ಕೆ ಹೇಗೆ ಬಂದಿದ್ದೀರಿ ಎಂಬುದಕ್ಕೆ ವಿಸ್ತೃತ ಅಫಿಡವಿಟ್‌ನಲ್ಲಿ ಸಲ್ಲಿಸುವಂತೆ ಕೂಡ ಅರ್ಜಿದಾರರಿಗೆ ಸೂಚಿಸಿತು.

High Court Asks State Government Report On Mangaluru Golibar

"ಮಂಗಳೂರು ಗೋಲಿಬಾರ್: ಸರ್ಕಾರದಿಂದ ಮೃತರ ಕುಟುಂಬಕ್ಕಿಲ್ಲ ಪರಿಹಾರ"

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ದೇವಚಲ್ಲ ಗ್ರಾಮ ಮತ್ತು ಗಾಂಧಿ ನಗರದ ನಿವಾಸಿಗಳಾದ ಐಕೆ ಮೊಹಮ್ಮದ್ ಇಕ್ಬಾಲ್ ಎಳಿಮಲೆ ಮತ್ತು ಬಿ ಉಮರ್, ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಮಂಗಳೂರು ಗೋಲಿಬಾರ್‌ ಗೆ ಆದೇಶಿಸಿದ್ದು ಯಡಿಯೂರಪ್ಪ: ಸಿದ್ದರಾಮಯ್ಯಮಂಗಳೂರು ಗೋಲಿಬಾರ್‌ ಗೆ ಆದೇಶಿಸಿದ್ದು ಯಡಿಯೂರಪ್ಪ: ಸಿದ್ದರಾಮಯ್ಯ

ಈ ಪ್ರಕರಣದ ಕುರಿತು ವಸ್ತುಸ್ಥಿತಿಯ ವಿವರಗಳನ್ನು ದಾಖಲೆ ಸಹಿತ ಜ. 28ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್, ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಿದೆ. ಈ ಪ್ರಕರಣ ಸಂಬಂಧ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರಿಗೆ ನೋಟಿಸ್ ಜಾರಿ ಮಾಡಿದೆ.

English summary
Karnataka High Court on Tuesday asked state government to submit inquiry report on Mangaluru firing incident in two weeks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X