ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಗ್ ಬ್ರೇಕಿಂಗ್; ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ರದ್ದು

|
Google Oneindia Kannada News

ಬೆಂಗಳೂರು, ನವೆಂಬರ್ 19 : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಕರ್ನಾಟಕ ಸರ್ಕಾರ ಅಕ್ಟೋಬರ್ 8ರಂದು ಮೀಸಲಾತಿ ಪಟ್ಟಿ ಪ್ರಕಟಿಸಿತ್ತು. ಮೀಸಲಾತಿ ನಿಗದಿ ಬಗ್ಗೆ ಹಲವು ದೂರು ಕೇಳಿ ಬಂದಿತ್ತು.

ಹಾಸನ ನಗರಸಭೆ ಚುನಾವಣೆಗೆ ಹೈಕೋರ್ಟ್ ಒಪ್ಪಿಗೆ; ಜೆಡಿಎಸ್‌ಗೆ ಹಿನ್ನಡೆ ಹಾಸನ ನಗರಸಭೆ ಚುನಾವಣೆಗೆ ಹೈಕೋರ್ಟ್ ಒಪ್ಪಿಗೆ; ಜೆಡಿಎಸ್‌ಗೆ ಹಿನ್ನಡೆ

ಸರ್ಕಾರ ಹೊರಡಿಸಿದ್ದ ಮೀಸಲಾತಿ ಪಟ್ಟಿಯನ್ನು ಗುರುವಾರ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿದೆ. ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಅವಕಾಶ ನೀಡಿದೆ.

ಬಿಬಿಎಂಪಿ ಮೀಸಲಾತಿ ಪಟ್ಟಿ; ಮಾಜಿ ಮೇಯರ್‌ಗಳ ಕೈ ತಪ್ಪಿದ ವಾರ್ಡ್! ಬಿಬಿಎಂಪಿ ಮೀಸಲಾತಿ ಪಟ್ಟಿ; ಮಾಜಿ ಮೇಯರ್‌ಗಳ ಕೈ ತಪ್ಪಿದ ವಾರ್ಡ್!

High Court Cancelled Reservation List Of Urban Local Bodies

ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಹಲವಾರು ಕಡೆ ಚುನಾವಣೆಗಳು ನಡೆದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆದಿದೆ.

ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ ಬಿಬಿಎಂಪಿಯ 198 ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ

ಹೈಕೋರ್ಟ್ ಮುಂದಿನ ಆದೇಶದ ತನಕ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅಮಾನತಿಯಲ್ಲಿ ಇರಲಿದೆ. ಸರ್ಕಾರ ಮೇಲ್ಮನವಿ ಸಲ್ಲಿಸಿದ ಬಳಿಕ ನ್ಯಾಯಾಲಯ ಅಂತಿಮ ಆದೇಶ ನೀಡಲಿದೆ.

Recommended Video

Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಬಹುಮತ ಪಡೆದಿದ್ದರೂ ಮೀಸಲಾತಿ ಪ್ರಕಾರ ಅಧ್ಯಕ್ಷ ಹುದ್ದೆ ಬಿಜೆಪಿ ಪಾಲಾಗಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭಿಸಲಾಗಿತ್ತು.

English summary
Karnataka high court cancelled the reservation list of urban local bodies. Karnataka government released list on October 8, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X