• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆನ್‌ಲೈನ್ ಜೂಜು; ನಿರ್ಧಾರ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 02: ರಾಜ್ಯದಲ್ಲಿ ಆನ್‌ಲೈನ್ ಜೂಜಾಟ ನಿಷೇಧದ ಸಂಬಂಧ ಸರ್ಕಾರ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿದೆ.

ಮಂಗಳವಾರ ಆನ್‌ಲೈನ್ ಜೂಜಾಟ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ನೇತೃತ್ವದ ವಿಭಾಗೀಯ ಪೀಠವು, "ಆನ್‌ಲೈನ್ ಜೂಜನ್ನು ರಾಜ್ಯದಲ್ಲಿ ನಿಷೇಧಿಸಬೇಕೆ? ಈ ಸಂಬಂಧ ಸ್ಪಷ್ಟ ನಿಲುವು ತೆಗೆದುಕೊಳ್ಳಿ. ಮಾರ್ಚ್ 31ರ ಆದೇಶವನ್ನು ನೀವು ಪಾಲಿಸಿಲ್ಲ. ಈ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಮೇ 27ರ ಒಳಗೆ ಆನ್‌ಲೈನ್ ಜೂಜಿನ ಕುರಿತು ರಾಜ್ಯಗಳು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾರ್ಚ್ 31ರ ಆದೇಶದಲ್ಲಿ ತಿಳಿಸಲಾಗಿತ್ತು.

ಸೂಕ್ತ ನಿಯಮಾವಳಿ ರೂಪಿಸುವವರೆಗೂ ಎಲ್ಲಾ ರೀತಿಯ ಆನ್ ಲೈನ್ ಜೂಜಾಟ ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಕೊರೊನಾದಂಥ ಈ ಬಿಕ್ಕಟ್ಟಿನ ಸಮಯದಲ್ಲಿ ಆನ್‌ಲೈನ್ ಜೂಜಿನಿಂದ ಯುವಜನತೆ ತಪ್ಪು ದಾರಿ ಹಿಡಿಯುತ್ತಿದ್ದಾರೆ. ಈ ಸಂಬಂಧ ನಿಯಮಾವಳಿ ರೂಪಿಸುವಂತೆ ಮನವಿ ಮಾಡಿದ್ದರೂ ರಾಜ್ಯ ಸರ್ಕಾರ ಪರಿಗಣಿಸಿಲ್ಲ. ಹೀಗಾಗಿ ನಿಯಮಾವಳಿ ರೂಪಿಸುವವರೆಗೂ ಎಲ್ಲಾ ರೀತಿಯ ಆನ್‌ಲೈನ್ ಜೂಜಾಟವನ್ನು ನಿಷೇಧಿಸಿ ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಆಂಧ್ರದಲ್ಲಿ ಆನ್‌ಲೈನ್ ಜೂಜು ನಿಷೇಧ, ಜಗನ್ ಸರ್ಕಾರದ ಮಹತ್ವದ ತೀರ್ಮಾನ: ರಾಜ್ಯದಲ್ಲಿ ಯಾವಾಗ?ಆಂಧ್ರದಲ್ಲಿ ಆನ್‌ಲೈನ್ ಜೂಜು ನಿಷೇಧ, ಜಗನ್ ಸರ್ಕಾರದ ಮಹತ್ವದ ತೀರ್ಮಾನ: ರಾಜ್ಯದಲ್ಲಿ ಯಾವಾಗ?

Recommended Video

   Sonu Sood ಈಗ ಕೆಲವರ ಪಾಲಿನ ದೇವರು | Oneindia Kannada

   ರಾಜ್ಯ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟ ನಿಲುವು ದಾಖಲಿಸಬೇಕು ಎಂದು ಪೀಠ ತಿಳಿಸಿದ್ದು, ಜೂನ್ 22ರವರೆಗೂ ಗಡುವು ನೀಡಿದೆ. ರಮ್ಮಿ ಮತ್ತು ಪೋಕರ್‌ನಂತಹ ಆನ್‌ಲೈನ್ ಗೇಮ್‌ಗಳನ್ನು ಆಂಧ್ರಪ್ರದೇಶ ಸರ್ಕಾರ ಈಗಾಗಲೇ ನಿಷೇಧಿಸಿದೆ. ರಾಜ್ಯ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಕಾದುನೋಡಬೇಕಿದೆ.

   English summary
   Karnataka High Court on Tuesday directed the State government to come out with a decision on banning online gambling in Karnataka
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X