• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕೂಡಲೇ ಸೇವೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಮೂಲಕ 14 ದಿನಗಳ ಸಾರಿಗೆ ನೌಕರರ ಮುಷ್ಕರ ಇಂದಿಗೆ ಕೊನೆಯಾಗುವ ಸಾಧ್ಯತೆ ಇದೆ. ಸರ್ಕಾರದ ಪರವಾಗಿ ಹಾಜರಾಗಿದ್ದ ಎಜಿ ಪ್ರಭುಲಿಂಗ ನಾವದಗಿ, ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಕಾರ್ಮಿಕರ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದೆ. ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರವೆಂದು ಘೋಷಿಸಲಾಗಿದೆ.

ಕೆಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣಿಸಲು ಸಾಧ್ಯವಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ, ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಸೂಚನೆ ನೀಡಿ ಮುಷ್ಕರ ನಿರದ ಸಾರಿಗೆ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.

ಇನ್ನು ನ್ಯಾಯಾಲಯದ ಆದೇಶದ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ನಮಗೆ ನ್ಯಾಯಾಲಯದ ಪೂರ್ಣ ಪ್ರಮಾಣದ ಆದೇಶವನ್ನು ನೋಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

English summary
Karnataka High Court given notice to Transport employees union and directed that transport employees cancel strike and start work immediately.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X