ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ; ಕರ್ನಾಟಕ HC

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಲಾಗಿದೆ. ಶ್ರೀಗಳಿಗೆ ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಂಡಿದೆ.

ರೆಹಾನ್ ಖಾನ್ ಎಂಬುವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Karnataka High court dismiss plea seeking direct PM to Honour Bharat Ratna to Siddaganga Seer

ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ
ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಮಠದ ಆವರಣದಲ್ಲಿ ಇಂದು (ಏಪ್ರಿಲ್ 1) ಅದ್ಧೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದಾರೆ.

ಅಮಿತ್ ಶಾ ಬೆಳಗ್ಗೆ 10.30 ಕ್ಕೆ ತುಮಕೂರು ವಿವಿಯ ಹೆಲಿಪ್ಯಾಡ್‌ಗೆ ಆಗಮಿಸಿದ ಬಳಿಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ಪ್ರಯಾಣ ಮಾಡಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

Recommended Video

ಲೇಟ್ ಆಗಿ ಬಂದ್ರು ಲೇಟೆಸ್ಟ್ ಆಗಿ ಪರ್ಫಾರ್ಮ್ ಮಾಡ್ತಾರೆ ಡಿಕೆ | Dk next level | Oneindia Kannada

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾದರು. ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

English summary
Karnataka High court dismiss plea seeking Direct Prime Minister to Honour Bharat Ratna to Siddaganga Seer Dr Shivakumara Swami.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X