ಎನ್‌ಆರ್‌ಐಗಳ ಮತದಾನಕ್ಕೆ ಅವಕಾಶ; ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಮೇ 3; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಪಂಚದ ನಾನಾ ದೇಶಗಳಲ್ಲಿ ನೆಲೆಸಿರುವವರಿಗೆ ಅಲ್ಲಿಂದಲೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಅಲ್ಲದೇ, ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವುದು ದೀರ್ಘಕಾಲದ ಚುನಾವಣಾ ನ್ಯಾಯಶಾಸ್ತ್ರಕ್ಕೆ ವಿರುದ್ಧವಾಗಿದೆ. ಹಾಗಾಗಿ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಗೆ ಭಾರತೀಯ ರಾಯಭಾರ ಕಚೇರಿಗಳಲ್ಲಿ ಮತಗಟ್ಟೆ ತೆರೆಯುವಂತೆ ಕೋರಿ ಸಾಗರೋತ್ತರ ಕನ್ನಡಿಗರು ಸಂಘದ ಜಂಟಿ ಕಾರ್ಯದರ್ಶಿ ಮತ್ತು 2008ರಿಂದ ಸೌದಿ ಅರೇಬಿಯಾದಲ್ಲಿ ಶುಶ್ರೂಕರಾಗಿ ಸೇವೆ ಸಲ್ಲಿಸುತ್ತಿರುವ ಎಂ . ರವಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಮತದಾನಕ್ಕೆ ಅವಕಾಶ ನೀಡಿ; ಕೇಂದ್ರ ಚುನಾವಣಾ ಆಯೋಗದ ಪರ ವಕೀಲರು, ಮತದಾನ ಒಂದು ಮೂಲಭೂತ ಹಕ್ಕಲ್ಲ. ಅದು ಕಾನೂನಿನ ಜೀವವಾಗಿದೆ. ಇದನ್ನು ಹಕ್ಕಾಗಿ ಪರಿಗಣಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅರ್ಜಿದಾರರ ಪರ ವಕೀಲರು, ವಿಶ್ವದ ವಿವಿಧ ದೇಶಗಳಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಮಂದಿ ಭಾರತೀಯರು ನೆಲೆಸಿದ್ದಾರೆ. ಫಿಲಿಫೈನ್ಸ್, ಇಟಲಿಯಂತಹ ದೇಶಗಳು ತಮ್ಮ ಅನಿವಾಸಿ ನಿವಾಸಿಗರಿಗೆ ಮತದಾನದ ಹಕ್ಕನ್ನು ನೀಡಿದೆ. ಅದೇ ರೀತಿಯಲ್ಲಿ ಭಾರತೀಯರಿಗೂ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
ಕೊರೋನಾ ಸಂದರ್ಭದಲ್ಲಿ ಹೊರ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಕರೆತರುವುದಕ್ಕಾಗಿ ಸಾಗರೋತ್ತರ ಕನ್ನಡಿಗರು ಸಂಘ ರಚನೆಯಾಗಿದೆ. ಅಲ್ಲದೆ, ಕೊರೋನಾ ಸಂದರ್ಭದಲ್ಲಿ ತೊಂದರೆಗೆ ಸಿಲುಕಿದ ಸುರಕ್ಷಿತವಾಗಿ ಕರೆತರುವುದಕ್ಕಾಗಿ ಸಂಘವನ್ನು ಪ್ರಾರಂಭಿಸಲಾಗಿದ್ದು, ಯುನೈಟೆಡ್ ಆಫ್ ಕಿಂಗಡಮ್‌ನಲ್ಲಿ ಸಂಘವನ್ನು ನೋಂದಾಯಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.

ಅಲ್ಲದೇ, ದೇಶದ ಯಾವುದೇ ರಾಜ್ಯದಲ್ಲಿ ನೆಲೆಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಸೇವೆ ಸಲ್ಲಿಸುತ್ತಿರುವವರಿಗಾಗಿ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿಯಲ್ಲಿ ಅನಿವಾಸಿ ಭಾರತೀಯರಿಗೂ ಅವಕಾಶ ಮಾಡಿಕೊಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ರೀತಿಯಲ್ಲಿ ಮತದಾನದ ಹಕ್ಕನ್ನು ಅನಿವಾಸಿ ಭಾರತೀಯರಿಗೆ ನೀಡಿದಲ್ಲಿ ಹೆಚ್ಚು ಸಹಕಾರಿಯಾಗಲಿದೆ. ಮತದಾರರ ಹಿತಾಸಕ್ತಿಗಳನ್ನು ರಕ್ಷಣೆ ಮಾಡಿದಂತಾಗುತ್ತದೆ. ಇದಕ್ಕೆ ಅವಕಾಶ ನೀಡಿದಿದ್ದಲ್ಲಿ ಅನಿವಾಸಿ ಭಾರತೀಯರು ಮತದಾನದ ಹಕ್ಕಿನ ವಂಚಿತರಾಗಲಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಿದ್ದರು.
ಅರ್ಜಿದಾರರು 2023ರ ಏಪ್ರಿಲ್ 17 ರಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಭಾರತದ ಪ್ರಜೆಗಳಾಗಿದ್ದು, ಹೊರ ದೇಶಗಳಲ್ಲಿ ನೆಲೆಸಿರುವವರಿಗೆ ಅಲ್ಲಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಮನೆಯಿಂದಲೇ ಮತದಾನ; ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 80 ವಯಸು ಮೇಲ್ಪಟ್ಟ ಮತ್ತು ವಿಶೇಷಚೇತನ ಮತದಾರರಿಗೆ ಅನುಕೂಲವಾಗಲು ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಏಪ್ರಿಲ್ 29 ರಿಂದ ಮೇ 1ರ ತನಕ ಈ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ಮನೆಯಿಂದಲೇ ಮತದಾನ ಮಾಡುವವರಿಗೆ 12ಡಿ ಅಡಿ ಅರ್ಜಿ ನೀಡಲಾಗಿತ್ತು. ಚುನಾವಣಾ ಅಧಿಕಾರಿಗಳು ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತದಾನ ಮಾಡಿಸಿದ್ದಾರೆ. ಮತದಾನ ಮಾಡುವುದು ಬಿಟ್ಟು ಉಳಿದ ಪ್ರಕ್ರಿಯೆ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications