15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿಗೆ ಹೈಕೋಟ್ ತಡೆಯಾಜ್ಞೆ

ಬೆಂಗಳೂರು ನವೆಂಬರ್ 30: ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಡಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕರ್ನಾಟಕದ ವಿವಿಧ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗಾಗಿ ಸರ್ಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಈ ಆಯ್ಕೆ ಪಟ್ಟಿ ಸಂಬಂಧ ಅಕ್ಷತಾ ಚೌಗಲೆ ಎಂಬವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಲತಾ ಶೆಟ್ಟಿ ವಕೀಲರು ವಾದ ಮಂಡಿಸಿದ್ದಾರೆ. ಇದೀಗ ಆಯ್ಕೆ ಪಟ್ಟಿಗೆ ಮುಂದಿನ ಆದೇಶದವರೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಹೈಕೋರ್ಟ್ ತಡೆಯಾಜ್ಞೆಯಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ. ಶಿಕ್ಷಣ ಇಲಾಖೆಯು 2022ರ ಮಾರ್ಚ್‌/ ಏಪ್ರಿಲ್ ತಿಂಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ಸಹ ನಡೆಸಿತ್ತು. ಪತ್ರಿಕೆ ಒಂದಕ್ಕೆ 68,873 ಅಭ್ಯರ್ಥಿಗಳು ಮತ್ತು ಪತ್ರಿಕೆ 2ಕ್ಕೆ 10,571 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು.

High Court Has Stayed The Provisional Selection List For 15,000 Teachers Recruitment

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಪಟ್ಟಿಯನ್ನುಇದೇ ನವೆಂಬರ್‌ 18ರಂದು ಪ್ರಕಟಿಸಲಾಗಿತ್ತು. ಒಟ್ಟು ಖಾಲಿ ಇರುವ 15,000 ಶಿಕ್ಷಕ ಹುದ್ದೆಗಳ ಪೈಕಿ 13,363 ಮಂದಿ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದರು ಎಂಬುದನ್ನು ಶಿಕ್ಷಣ ಇಲಾಖೆ ಖಚಿತಪಡಿಸಿತ್ತು.

ನೇಮಕಾತಿ ಬಹುತೇಕ ಮುಗಿದಿತ್ತು

1:2ರ ಅನುಪಾತದ ಪರಿಶೀಲನಾ ಪಟ್ಟಿಯಲ್ಲಿ 22,432 ಅಭ್ಯರ್ಥಿಗಳನ್ನು ಪರಿಗಣಿಸಲಾಗಿತ್ತು. 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಇರುವವರು ಸೂಕ್ತ ದಾಖಲೆಗಳ ಸಹಿತ ಆಯಾ ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಮತ್ತು ನೇಮಕಾತಿ ಕಚೇರಿಯಲ್ಲಿ ಖುದ್ದು ಸಲ್ಲಿಸಲು ಇದೇ ನವೆಂಬರ್ 19 ರಿಂದ 23ರವರೆಗೆ ಅವಕಾಶ ನೀಡಲಾಗಿತ್ತು.

High Court Has Stayed The Provisional Selection List For 15,000 Teachers Recruitment

ಇದೇ ನವೆಂಬರ್‌ 6ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ನಡೆದಿತ್ತು. ಅದರ ಅಂತಿಮ ಕೀ ಉತ್ತರಗಳನ್ನು ನವೆಂಬರ್‌ 9ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಆ ಕೀ ಉತ್ತರಗಳಿಗೂ ಆನ್‌ಲೈನ್‌ನಲ್ಲಿ ದಾಖಲೆ ಸಹಿತ ಆಕ್ಷೇಪಣೆ ಸಲ್ಲಿಸಲು ನವೆಂಬರ್‌ 10ರಿಂದ 17ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಈ ಎಲ್ಲ ಪ್ರಕ್ರಿಯೆಗಳ ಮಧ್ಯೆ ಶಿಕ್ಷಕರ ನೇಮಕಾತಿಯು ಹೈಕೊರ್ಟ್ ಮೆಟ್ಟಿಲೇರಿದ್ದರಿಂದ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯರ ಪೀಠವು ಮುಂದಿನ ಆದೇಶದವರೆಗೆ ತಡೆ ನೀಡಿ ಆದೇಶಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+