Ramesh Jarakiholi: ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು, ಮಾರ್ಚ್ 15: ಅಪೆಕ್ಸ್ ಬ್ಯಾಂಕ್ಗೆ ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ.
ಲೋಕಸಭಾ ಚುನಾವಣೆಯ ತಯಾರಿ ಒಂದು ಕಡೆಯಾದ್ರೆ, ಇತ್ತ ತಮ್ಮ ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ಮಾಜಿ ಸಚಿವ ಹಾಗೂ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್ಗೆ ತಿಳಿಸಿದರು.

ಸಿಐಡಿ ನೋಟಿಸ್ ನೀಡಿದರೂ ರಮೇಶ್ ಜಾರಕಿಹೊಳಿ ತನಿಖೆಗೆ ಹಾಜರಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಈ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ನಿಂದ 232 ಕೋಟಿ 88 ಲಕ್ಷರೂಪಾಯಿ ಸಾಲ ಪಡೆದಿದ್ದರು. ಇದು ರಮೇಶ್ ಜಾರಕಿಹೊಳಿ ಒಡೆತನದ್ದು, ಆದರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.
ಈ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದು, ಕಂಪನಿಯ ಹುದ್ದೆಗಳಿಗೆ ರಾಜಿನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್ಸಿಎಲ್ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರ್ಟ್ಗೆ ಮನವಿ ಮಾಡಿದ್ದಾರೆ.












Click it and Unblock the Notifications