ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Teachers Recruitment : 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ರದ್ದುಗೊಳಿಸಿದ ಹೈಕೋರ್ಟ್

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜನವರಿ 31; ರಾಜ್ಯದ ಸುಮಾರು 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಅನೂರ್ಜಿತಗೊಳಿಸಿರುವ ನ್ಯಾಯಾಲಯ, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪರಿಗಣಿಸಿ ಹೊಸ ಪಟ್ಟಿ ಸಿದ್ಧಪಡಿಸುವಂತೆ ಸರ್ಕಾರಕ್ಕೆ ಅದೇಶ ನೀಡಿದೆ.

ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ಗೆ ತಡೆಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‌ಗೆ ತಡೆ

ಇದು ಇನ್ನೇನು ನೇಮಕ ಪ್ರಕ್ರಿಯೆ ಮುಗಿಯಿತು ಎಂದುಕೊಂಡಿದ್ದ ಸರ್ಕಾರಕ್ಕೆ ಬರಸಿಡಿಲಿನಂತಾಗಿದ್ದು, ಇದೀಗ ಮತ್ತೆ ಕಾನೂನು ಹೋರಾಟ ಮುಂದುವರಿಸಬೇಕಾಗಿದೆ. ಅತ್ತ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಪಡೆದಿದ್ದ 15 ಸಾವಿರ ಮಂದಿ ಇನ್ನೂ ನೇಮಕಕ್ಕಾಗಿ ಕಾಯಬೇಕಾಗುತ್ತದೆ.

ರಾಯಚೂರು: ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ತೃತೀಯ ಲಿಂಗಿ ಪೂಜಾ ರಾಯಚೂರು: ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ತೃತೀಯ ಲಿಂಗಿ ಪೂಜಾ

high court

ಅಕ್ಷತಾ ಚೌಗಲ ಸೇರಿ ನೂರಾರು ಮಹಿಳಾ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿದ್ದ ಶಿಕ್ಷಣ ಇಲಾಖೆಯ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ 80ಕ್ಕೂ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

ಶಿಕ್ಷಕರ ನೇಮಕಾತಿ ಹಗರಣ: ವರದಿ ಮೂಲ ಬಹಿರಂಗಪಡಿಸುವಂತೆ ದಿ ಫೈಲ್ ಸಂಸ್ಥಾಪಕರಿಗೆ ಪೊಲೀಸ್ ನೋಟಿಸ್ಶಿಕ್ಷಕರ ನೇಮಕಾತಿ ಹಗರಣ: ವರದಿ ಮೂಲ ಬಹಿರಂಗಪಡಿಸುವಂತೆ ದಿ ಫೈಲ್ ಸಂಸ್ಥಾಪಕರಿಗೆ ಪೊಲೀಸ್ ನೋಟಿಸ್

ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌, ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿದ್ದು, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪರಿಗಣಿಸಿ ಹೊಸದಾಗಿ ಪಟ್ಟಿ ಸಿದ್ಧಪಡಿಸುವಂತೆ ನಿರ್ದೇಶಿಸಿದೆ.

ಅರ್ಜಿದಾರರ ವಾದವೇನು?; ಅರ್ಜಿದಾರರು 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಕೋರ್ಟ್‌ಗೆ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ: ಶಿಕ್ಷಕರ ನೇಮಕಾತಿ ಸಂಬಂಧ 2022ರ ಮಾ. 21ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟಾರೆ 1,16,223 ಮಂದಿ ಅರ್ಜಿ ಸಲ್ಲಿಸಿದ್ದರು, ಈ ಪೈಕಿ ಮೇ ನಲ್ಲಿನಡೆದ ಪರೀಕ್ಷೆಗೆ 68,849 ಮಂದಿ ಹಾಜರಾಗಿದ್ದರು. ಬಳಿಕ 51,098 ಮಂದಿ ಅರ್ಹತೆ ಹೊಂದಿದ್ದರು.

1:2ರ ಅನುಪಾತದ ಪಟ್ಟಿಯಲ್ಲಿ22,432 ಮಂದಿಯನ್ನು ಪರಿಗಣಿಸಲ್ಪಟ್ಟಿತ್ತು. ಅಂತಿಮವಾಗಿ 13,363 ಅಭ್ಯರ್ಥಿಗಳು 1:1ರ ಪಟ್ಟಿಗೆ ಆಯ್ಕೆಯಾಗಿದ್ದರು. ಪದವೀಧರ ಪ್ರಾಥಮಿಕ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ ಪ್ರಕ್ರಿಯೆ 1:1ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ನವೆಂಬರ್ 18ರಂದು ಪ್ರಕಟಿಸಿತ್ತು.

15 ಸಾವಿರ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 13,363 ಶಿಕ್ಷಕರು ಅರ್ಹತೆ ಹೊಂದಿದ್ದರು. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿತ್ತು. ಅವುಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡುವ ಮೊದಲೇ ಹೈಕೋರ್ಟ್‌ ನವೆಂಬರ್ 28ರಂದು ತಡೆಯಾಜ್ಞೆ ನೀಡಿತ್ತು. ಈಗ ಇಡೀ ಪಟ್ಟಿಯನ್ನೇ ರದ್ದು ಮಾಡಿದೆ.

English summary
Karnataka high court ordered and cancelled appointment of 15 thousand teachers of primary school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X