ಸಿದ್ದರಾಮಯ್ಯ ಸರ್ಕಾರದ ಅನ್ಯಾಯ ನಡೆಗೆ ಹೈಕೋರ್ಟ್ ಚಡಿ ಏಟು, ಛೀಮಾರಿ: ಪಟ್ಟಿ ಕೊಟ್ಟ ಆರ್.ಅಶೋಕ್

ಬೆಂಗಳೂರು, ಮೇ 30: ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಕ್ಕೆ ಬಂದ ಮೇಲೆ ಇನ್ನಿಲ್ಲದಂತೆ ಅನ್ಯಾಯ ಮಾಡಿದೆ. ಓಲೈಕೆ ರಾಜಕಾರಣ ಮಾಡಿದೆ. ಇಂತಹ ನಡೆ ನಿರ್ಧಾರಗಳಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಛೀಮಾರಿ ಹಾಕುತ್ತಲೇ ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಇದಷ್ಟೇ ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಾಕಷ್ಟು ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಅವರು, ಆ ಬಗ್ಗೆ ಪಟ್ಟಿ ನೀಡಿದ್ದಾರೆ.

'ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಛೀಮಾರಿ' ಶಿರ್ಷಿಕೆಯಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್ ಅವರು, ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ವಿವರಿಸಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಚಡಿ ಏಟು ಕೊಟ್ಟಿದೆ ಎಂದು ಅವರು ಟೀಕಿಸಿದ್ದಾರೆ.

High Court of Karnataka Rebukes Congress Government Again Says R Ashoka

* ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಅನ್ಯಾಯದ ನಡೆಗಳಿಗೆ ನ್ಯಾಯಾಲಯ ಛೀಮಾರಿ ಹಾಕುತ್ತಿರುವುದು ಇದೆ ಮೊದಲಲ್ಲ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಅದರ ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಹೊಂಚು ಕಾಕಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿತ್ತು.

ನಿರಂಕುಶವಾದಿ ಧೋರಣೆಗೆ ಛೀಮಾರಿ

* ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ಎಂದು ರಾಜ್ಯ

ಕಾಂಗ್ರೆಸ್‌ ಸರ್ಕಾರದ ನಿರಂಕುಶವಾದಿ ಧೋರಣೆಗೆ ಛೀಮಾರಿ ಹಾಕಿದ್ದ ಮಾನ್ಯ ಹೈಕೋರ್ಟ್ ತತಕ್ಷಣವಾಗಿ ಅವರನ್ನು ಬಿಡುಗಡೆಗೊಳಿಸಿ ಎಂದು ಆದೇಶ ನೀಡಿತ್ತು.

* ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಿಡಿಎ ಸಂಸ್ಥೆಯನ್ನು ಭ್ರಷ್ಟಾಚಾರ, ಅವ್ಯವಸ್ಥೆಯ ಕೂಪವಾಗಿರಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣವೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು, ಮಾರುವೇಷದಲ್ಲಿ ಒಮ್ಮೆ ನೋಡಿಕೊಂಡು ಬನ್ನಿ, ಸುಗ್ರೀವಾಜ್ಞೆ ಮೂಲಕ ಬಿಡಿಎ ಸಂಸ್ಥೆ ಮುಚ್ಚುವುದು ಒಳ್ಳೆಯದು ಎಂದು ಕೋರ್ಟ್ ಹೇಳಿತ್ತು.

* ಸರ್ಕಾರಿ ವಸತಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳನ್ನು ಮಲಗಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಕ್ಕೆ ನ್ಯಾಯಾಲಯ ಛೀಮಾರಿ ಹಾಕಿತ್ತು. ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

* ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಡೆಗೆ ನಿಂದ ಛೀಮಾರಿ ಹಾಕಿಸಿಕೊಂಡಿತ್ತು.

ಕಾಂಗ್ರೆಸ್ ಸರ್ಕಾರ ಇದರಲ್ಲಿ ದಾಖಲೆ ಬರೆದಿದೆ

* ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ವಿರುದ್ಧ ಕೋರ್ಟ್ ಮೆಟ್ಲೇರಿದಾಗಲೂ ಸಿದ್ದರಾಮಯ್ಯ ಸರ್ಕಾರ ಮುಖಭಂಗ ಅನುಭವಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನ್ಯಾಯಾಲಯಗಳಿಮದ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+