ಕಬ್ಬನ್ ಪಾರ್ಕ್ ಒಳಗೆ ಇನ್ಮುಂದೆ ನಾಯಿಗಳ ಎಂಟ್ರಿ ಇಲ್ಲ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು, ಡಿ. 09: ಕಬ್ಬನ್ ಪಾರ್ಕ್ ಒಳಗೆ ಇನ್ನು ಮುಂದೆ ಸಾಕು ನಾಯಿ ಆಗಲೀ ಬೀದ ನಾಯಿ ಆಗಲೀ ಪ್ರವೇಶ ಮಾಡುವಂತಿಲ್ಲ. ಕಬ್ಬನ್ ಉದ್ಯಾನವನದಲ್ಲಿ ಇನ್ಮುಂದೆ ನಾಯಿಗಳು ಕಾಣಿಸಿಕೊಂಡರೆ ಬಿಬಿಎಂಪಿ ಅಧಿಕಾರಿಗಳ ತಲೆದಂಡ ಖಚಿತ! ಯಾಕೆಂದರೆ ಇಂತಹ ಮಹತ್ವದ ಆದೇಶವನ್ನು ಹೈಕೋರ್ಟ್ ನೀಡಿದೆ.
ಕಬ್ಬನ್ ಪಾರ್ಕ್‌ನಲ್ಲಿ ಬೀದಿ ನಾಯಿಗಳಿಗೆ ಅವಕಾಶ ಕೊಟ್ಟಿರುವ ಸಂಬಂಧ ಹೈಕೋರ್ಟ್ ಬಿಬಿಎಂಪಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಬ್ಬನ್ ಉದ್ಯಾನವನದಲ್ಲಿ ಬೀದಿ ನಾಯಿಗಳ ಹಾವಳಿ ಕುರಿತ ಅರ್ಜಿ ವಿಚಾರಣೆ ನಡಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ಕಬ್ಬನ್ ಪಾರ್ಕ್ ಒಳಗೆ ಕೆಲವರು ಸಾಕು ನಾಯಿಗಳನ್ನು ತಂದು ಮಲ ಮೂತ್ರ ವಿಸರ್ಜನೆ ಮಾಡಿಸುತ್ತಾರೆ. ಸಾಕು ನಾಯಿ ನೋಡಿ ಬೀದಿ ನಾಯಿಗಳು ಕಬ್ಬನ್ ಪಾರ್ಕ್ ಒಳಗೆ ಬರುತ್ತಿವೆ.ಇದರಿಂದ ಸಾರ್ವಜನಿಕರು ಓಡಾಡುವುದು ಕಷ್ಟ. ಕಬ್ಬನ್ ಪಾರ್ಕ್ ಒಳಗೆ ಬೀದಿ ನಾಯಿಗಳು ಪ್ರವೇಶಿಸದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ರಮ ಜರುಗಿಸಿ ವರದಿಯನ್ನು ನ್ಯಾಯಾಯಲಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಒಳಗೆ ನಾಯಿಗಳನ್ನು ಬಿಡುತ್ತಿರುವುದರಿಂದ ಜನರು ಪಾರ್ಕಿನಲ್ಲಿ ಓಡಾಡಲು ಕಷ್ಟವಾಗುತ್ತಿದೆ. ಬೀದಿ ನಾಯಿಗಳು ಪ್ರವೇಶ ಮಾಡುತ್ತಿವೆ. ಬೀದಿ ನಾಯಿಗಳಿಗೆ ಕೆಲವರು ಊಟ ತಂದು ಹಾಕುತ್ತಾರೆ. ಊಟ ಇಲ್ಲದ ವೇಳೆ ನಾಯಿಗಳು ಆಕ್ರೋಶಗೊಂಡು ದಾಳಿ ಮಾಡುತ್ತವೆ. ಇದು ಅಪಾಯಕಾರಿ. ಇನ್ನು ಸಾಕು ನಾಯಿಗಳನ್ನು ಮಾಲೀಕರು ತಂದು ಪಾರ್ಕ್ ಒಳ ಭಾಗದಲ್ಲಿ ಮಲ- ಮೂತ್ರ ವಿಸರ್ಜನೆ ಮಾಡಿಸುತ್ತಾರೆ. ಇದರಿಂದ ಜನರಿಗೆ ಪಾರ್ಕಿನಲ್ಲಿ ಓಡಾಡಲು ಕಷ್ಟವಾಗುತ್ತದೆ. ಪಾರ್ಕ್ ಒಳಗೆ ನಾಯಿಗಳು ಬಾರದಂತೆ ಬಿಬಿಎಂಪಿ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ನೋಟಿಸ್ ಜಾರಿ ಮಾಡಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಒಳಗೆ ಸಾಕು ನಾಯಿಗಳ ಪ್ರವೇಶ ನಿಷೇಧಕ್ಕೆ ಬಿಬಿಎಂಪಿ ಚಿಂತನೆ ನಡೆಸಿದೆ. ಇದರ ಜತೆಗೆ ಬೀದಿ ನಾಯಿಗಳು ಪಾರ್ಕ್ ಒಳಗೆ ಪ್ರವೇಶಿಸದಂತೆ ಕ್ರಮ ಜರುಗಿಸಲು ತಲೆ ಕೆಡಿಸಿಕೊಳ್ಳುತ್ತಿದೆ. ಕಬ್ಬನ್ ಉದ್ಯಾನವನಕ್ಕೆ ಐದಕ್ಕೂ ಹೆಚ್ಚು ಕಡೆ ಪ್ರವೇಶ ದ್ವಾರಗಳಿವೆ. ಕಾರ್ಪೋರೇಷನ್ ವೃತ್ತ, ಕೆ.ಆರ್. ಸರ್ಕಲ್ ವೃತ್ತ, ಹೈಕೋರ್ಟ್ ಮುಖ್ಯ ದ್ವಾರ, ಪ್ರೆಸ್ ಕ್ಲಬ್ ದ್ವಾರ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ದ್ವಾರ, ವೆಂಕಟಪ್ಪ ಆರ್ಟ್ ಗ್ಯಾಲರಿ ಸೇರಿದಂತೆ ಸಾಕಷ್ಟು ದಾರಿಗಳಿವೆ. ನಗರದ ಹೃದಯ ಭಾಗದಲ್ಲಿರುವ ಈ ಪ್ರದೇಶದಲ್ಲಿ ಬಿದಿರು - ಮರಗಳಿರುವ ಕಾರಣ ಬೀದಿ ನಾಯಿಗಳ ದಂಡು ಕೂಡ ನೆಲೆಯೂರಿದೆ. ಇದೀಗ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು ಬಿಬಿಎಂಪಿ ಹೊರ ಸಾಗಿಸುತ್ತದೆಯೋ ಅಥವಾ ಬೀದಿ ನಾಯಿಗಳು ಎಂಟ್ರಿ ಕೊಡದಂತೆ ಬೇಲಿ ಹಾಕುತ್ತೋ ಕಾದು ನೋಡಬೇಕಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications