BJP MLC Ravikumar: ಜೂನ್ 8ರ ವರೆಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಬಂಧಿಸಂದತೆ ಕೋರ್ಟ್ ಆದೇಶ
BJP MLC Ravikumar: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹಾಗಾದ್ರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರ ವಿರುದ್ಧ ಎಫ್‌ಐರ್ ದಾಖಲಾಗಿತ್ತು. ಬಳಿಕ ಎಫ್‌ಐಆರ್ ರದ್ದು ಕೋರಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ರವಿಕುಮಾರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಜೂನ್ 8ರ ವರೆಗೆ ಅವರನ್ನು ಬಂಧಿಸಬಾರದು ಎಂದು ಆದೇಶ ನೀಡಿದೆ. ಅಲ್ಲದೆ, ತನಿಖೆಗೆ ಸಹಕರಿಸುವಂತೆ ರವಿಕುಮಾರ್ ಅವರಿಗೆ ಸೂಚನೆ ನೀಡಿದೆ.
ದೂರಿನಲ್ಲಿ ಏನಿದೆ?: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೆಪಿ ನಗರದ ನಿವಾಸಿ ಆಗಿರುವ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಹಿನ್ನೆಲೆ ಬಿಎನ್‌ಎಸ್ ಸೆಕ್ಷನ್ 351(3), 75(3), 79 ಅಡಿ ಪ್ರಕರಣ ದಾಖಲು ಆಗಿದೆ.
'ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿ ಆಗಿರುತ್ತೇನೆ. ಜುಲೈ 1ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು. ಈ ವೇಳೆ ರವಿಕುಮಾರ್ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ 'ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆ ಎಂಉ' ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಟಿವಿಯಲ್ಲಿ ಬಂದ ಈ ಸುದ್ದಿ ನೋಡಿ ನನಗೆ ನೋವುಂಟಾಗಿದೆ,' ಎಂದು ಹೇಳಿದ್ದಾರೆ.
ರವಿಮಾಕರ್ ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಧಕ್ಕೆ ತಂದು ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದೆ. ಇದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ." ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.











Click it and Unblock the Notifications