CT Ravi: ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌

CT Ravi: ಬೆಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ತಮ್ಮ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಚಿವೆ ಹೆಬ್ಬಾಳಕರ್ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಇಂದು (ಡಿಸೆಂಬರ್ 20) ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ (ಡಿಸೆಂಬರ್ 21) ಮುಂದೂಡಿತ್ತು. ಆದರೆ, ಇತ್ತ ಹೈಕೋರ್ಟ್‌ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.

High Court Orders Release of C T Ravi

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಿನ್ನೆಲೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದರು. ಸುವರ್ಣಸೌಧದಲ್ಲೇ ನಿನ್ನೆ (ಡಿಸೆಂಬರ್ 19) ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಇನ್ನು ಇಂದು (ಡಿಸೆಂಬರ್ 20 ಹೈಕೋರ್ಟ್‌ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

ನ್ಯಾ. ಉಮಾ ಪೀಠದಿಂದ ಆದೇಶ: ಹೈಕೋರ್ಟ್‌ ಸಿ.ಟಿ.ರವಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಮಧ್ಯಂತರ ಆದೇಶ ಹೊರಡಿಸಿದೆ. ಎಲ್ಲಿದ್ದಾರೆಯೋ ಅಲ್ಲಿಂದಲೇ ಬಿಡುಗಡೆ ಮಾಡಿ ಎಂದು ತಿಳಿಸಿದೆ. ಅಲ್ಲದೆ, ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸಿ.ಟಿ.ರವಿ ಅವರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಮತ್ತೊಂದೆಡೆ ಈ ಆದೇಶ ಹೊರಬಿದ್ದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ.

ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ: ಬಿಡುಗಡೆ ಆದೇಶದ ಬೆನ್ನಲ್ಲೇ ಸಿಟಿ ರವಿ ಪ್ರತಿಕ್ರಿಯಿಸಿದ್ದು, ಹೈಕೋರ್ಟ್​ ಆದೇಶದಿಂದ ಸತ್ಯಕ್ಕೆ ಜಯ ಸಿಕ್ಕಿದೆ. ವೈಯಕ್ತಿಕವಾಗಿ ನಾನು ಎಂದೂ ಟೀಕೆ ಮಾಡಲ್ಲ. ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳದುಕೊಳ್ಳಿ. ಡಿ.ಕೆ.ಶಿವಕುಮಾರ್​ ಬಗ್ಗೆ ರಾಮನಗರದಲ್ಲಿ ಕೇಳಿ ತಿಳಿದುಕೊಳ್ಳಿ ಎಂದು ಹೇಳಿದರು.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬಗ್ಗೆ ಕೇಳಿ ತಿಳಿದುಕೊಳ್ಳಿ. ನಾನು ದೂರು ನೀಡಿದರೂ ಎಫ್​ಐಆರ್​ ದಾಖಲಿಸಿಕೊಳ್ಳುತ್ತಿಲ್ಲ. ನನ್ನ ಮೇಲೆ ಸಾಕ್ಷಿ ಇಲ್ಲದಿದ್ದರೂ ಎಫ್​ಐಆರ್​ ದಾಖಲಿಸುತ್ತಾರೆ. ನೇರವಾಗಿ ನಾನು ಬೆಂಗಳೂರಿಗೆ ಬರುತ್ತೇನೆ ಎಂದರು. ಅಲ್ಲದೆ, ನಮ್ಮ ಕಾರ್ಯಕರ್ತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ನನ್ನನ್ನು ಟೆರರಿಸ್ಟ್‌ರಂತೆ ನಡೆಸಿಕೊಂಡಿದ್ದಾರೆ. ಊಟಕ್ಕೂ ಬಿಟ್ಟಿಲ್ಲ. ಆದರೆ ಇದೀಗ ಸತ್ಯಕ್ಕೆ ಜಯ ಸಿಕ್ಕಂತಾಗಿದೆ. ನನ್ನ ವಿರುದ್ಧ ಸದನದಲ್ಲೇ ದೌರ್ಜನ್ಯ ನಡೆದಿದ್ದು, ಬಹಳ ಸಂಕಟ ಅನುಭವಿಸಿದ್ದೇನೆ ಎಂದರು. ಇನ್ನು ನಾನು ವೈಯಕ್ತಿಕವಾಗಿ ಹೆಣ್ಣು ಮಕ್ಕಳನ್ನು ನಿಂದನೆ ಮಾಡುವವನಲ್ಲ ಎಂದು ಹೇಳಿದರು. ಆದರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+