ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಾಸಿಕ ಸ್ಟೈಪೆಂಡ್

ಎಂಡೋಸಲ್ಫಾನ್ ಸಂತ್ರಸ್ತರ ಪರಿಹಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಬರೆದ ಪತ್ರ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ದಾಖಲಿಸಿಕೊಂಡಿತ್ತು. ಸೋಮವಾರ ಎಂಡೋಸಲ್ಫಾನ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಅಮಿಕಸ್ ಕ್ಯೂರಿ ವಕೀಲೆ ವೈಶಾಲಿ ಹೆಗಡೆ ಅವರು ಸಲ್ಲಿಸಿದರು.
ಕೇರಳ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವಂತೆ, ಎಂಡೋಸಲ್ಫಾನ್ ದುಷ್ಪರಿಣಾಮಕ್ಕೆ ತುತ್ತಾಗಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ., ಶೇ.65ಕ್ಕಿಂತ ಹೆಚ್ಚಿನ ಪ್ರಮಾಣದ ಅಂಗವೈಕಲ್ಯಕ್ಕೆ ಗುರಿಯಾದವರಿಗೆ 5 ಲಕ್ಷ ರೂ. ಮತ್ತು ಶೇ. 65 ಕ್ಕಿಂತ ಕಡಿಮೆ ಅಂಗವೈಕಲ್ಯ ಹೊಂದಿದವರಿಗೆ 3 ಲಕ್ಷ ರೂ. ನೀಡಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. [ಕೊಕ್ಕಡದಲ್ಲಿ ನರಕ ಸೃಷ್ಟಿಸಿರುವ ಎಂಡೋಸಲ್ಫಾನ್]
ವರದಿ ಸಲ್ಲಿಸಿದ ನಂತರ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಒಟ್ಟು 6,140 ಮಂದಿ ಸಂತ್ರಸ್ತರಿಗೆ ಮಧ್ಯಂತರ ಪರಿಹಾರವಾಗಿ ಮಾಸಿಕ 'ಸ್ಟೈಪೆಂಡ್' ನೀಡಬೇಂದು ಸರ್ಕಾರಕ್ಕೆ ಆದೇಶ ನೀಡಿದೆ.
ಆದೇಶದಲ್ಲೇನಿದೆ : ಎಂಡೋಸಲ್ಫಾನ್ ದುಷ್ಪರಿಣಾಮದಿಂದ ಶೇ. 25 ರಿಂದ ಶೇ.60ರಷ್ಟು ಅಂಗವೈಕಲ್ಯಕ್ಕೆ ಗುರಿಯಾದವರಿಗೆ ಮಾಸಿಕ ತಲಾ 1,500 ರೂ. ಮತ್ತು ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಅಂಗವೈಕಲ್ಯ ಹೊಂದಿದವರಿಗೆ ಮಾಸಿಕ ತಲಾ 3,000 ರೂ. ಸ್ಟೈಪೆಂಡ್ ನೀಡಬೇಕು. ಈ ಸ್ಟೈಪೆಂಡ್ ಅನ್ನು ಮಾರ್ಚ್ 1ರಿಂದ ಆರಂಭಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡುವ ಮುಂದಿನ ಆದೇಶದವರೆಗೆ ವಿತರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಸ್ಟೈಪೆಂಡ್ ನೀಡುವುದು ಹೇಗೆ : ಸಂತ್ರಸ್ತರ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆ ತೆರೆದು, ಆ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಬೇಕು. ಆ ಹಣವನ್ನು ಖುದ್ದು ಸಂತ್ರಸ್ತರಿಗೆ ನೀಡಬೇಕು. ಸಂತ್ರಸ್ತರು ಖುದ್ದಾಗಿ ಹಣ ಪಡೆಯಲು ಸಾಧ್ಯವಾಗದಂಥ ಪರಿಸ್ಥಿತಿ ಇದ್ದಲ್ಲಿ ಸಂತ್ರಸ್ತರ ಪೋಷಕರು ಅಥವಾ ಆಪ್ತ ಸಂಬಂಧಿಕರಿಗೆ ನೀಡಬಹುದು ಎಂದು ಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ವೈದ್ಯರ ಭೇಟಿ : ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಸವಲತ್ತು ಒದಗಿಸುವ ಸಲುವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವೈದ್ಯರ ವಿಶೇಷ ತಂಡವು ವಾರಕ್ಕೊಮ್ಮೆ ಗ್ರಾಮಗಳಿಗೆ ಭೇಟಿ ನೀಡಬೇಕು. ಸಂತ್ರಸ್ತರ ಆರೋಗ್ಯ ತಪಾಸಣೆ ನಡೆಸಿ, ಚಿಕಿತ್ಸೆ ಹಾಗೂ ಇತರೆ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ತಿಳಿಸಲಾಗಿದೆ.
ವರದಿ ಒಪ್ಪಿದ ಸರ್ಕಾರ : ವೈಶಾಲಿ ಹೆಗಡೆ ಅವರು ನೀಡಿರುವ ವರದಿಯನ್ನು ಒಪ್ಪಿರುವುದಾಗಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಪರಿಹಾರ ಕಲ್ಪಿಸಲು ಸರ್ಕಾರ ಸಿದ್ಧವಿದೆ ಎಂದು ಸರ್ಕಾರ ತಿಳಿಸಿತು. ಅರ್ಜಿಯ ವಿಚಾರಣೆಯನ್ನು ಸರ್ಕಾರ ಮಾ. 7ಕ್ಕೆ ಮುಂದೂಡಿದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications