ಸಚಿವ ಕೆ.ಸಿ.ನಾರಾಯಣ ಗೌಡಗೆ ಬಿಗ್ ರಿಲೀಫ್: ಎಫ್‌ಐಆರ್ ವಿಚಾರಣೆ ರದ್ದು
ಬೆಂಗಳೂರು ಮೇ 31. ಕಳೆದ ಲೋಕಸಭೆ ಚುನಾವಣೆ ಮೇಳೆ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಸಂಬಂಧ ಸಚಿವ ಕೆ.ಸಿ. ನಾರಾಯಣ ಗೌಡ ಅವರ ವಿರುದ್ಧ ಕೆ.ಆರ್.ಪೇಟೆ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಮತ್ತು ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಕೆ.ಸಿ.ನಾರಾಯಣ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಮಾಡಿದೆ.
ಹೈಕೋರ್ಟ್ ಆದೇಶವೇನು? ಅಲ್ಲದೆ ಪ್ರಕರಣ ವಾಪಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಹೊಸದಾಗಿ ಕಾನೂನು ಕ್ರಮ ಜರುಗಿಸಬೇಕೆಂದು ಆದೇಶಿಸಿದೆ.

ಆದರೆ, ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ, ನಂತರ ತನಿಖೆಗೆ ಅನುಮತಿ ಕೋರಿ ಮ್ಯಾಜಿಸ್ಟ್ರೇರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮ್ಯಾಜಿಸ್ಟೇಟ್ ಕೋಟ್ ಸಹ ಪರಿಶೀಲಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸಲು ಅನುಮತಿಸಲಾಗಿದೆ ಎಂದಷ್ಟೇ ಆದೇಶಿಸಿದೆ. ತನಿಖೆಗೆ ನಡೆಸಲು ಅನುಮತಿ ನೀಡುವಾಗ ಸಕಾರಣಗಳನ್ನು ನಮೂದಿಸಬೇಕಾಗುತ್ತದೆ. ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸರು ಅನುಸರಿಸಿರುವ ವಿಧಾನ ಕಾನೂನು ಬಾಹಿರವಾಗಿರುವ ಕಾರಣ ಅರ್ಜಿದಾರರ ವಿರುದ್ಧದ ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲಾಗುತ್ತಿದೆ ಎಂದು ಹೈಕೋರ್ಟ್ ಆದೇಶಿಸಿದೆ.
ಕಳೆದ ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ 2019ರ ಮಾ.21ರಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಚಾರ ತಪಾಸಣಾ ದಳದ ಅಧಿಕಾರಿಯಾದ ಆರ್.ರವಿಕುಮಾರ್ ಅವರು ಅಂದಿನ ಶಾಸಕರಾಗಿದ್ದ ಹಾಲಿ ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ ಕೆ.ಆರ್.ಪೇಟೆ ಟೌನ್ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ನಾರಾಯಣ ಗೌಡ ಅವರು ೨೦೨೧ರ ಫೆ.೧೯ರಂದು ಮಧ್ಯಾಹ್ನ ೨ ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ತಮ್ಮ ವಾಸದ ಮನೆಯ ಬಳಿ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದ್ದರು.

ಈ ವೇಳೆ 'ಸರ್ಕಾರ ನಮ್ಮದೇ ಇದ್ದು, ಸಿನಿಮಾ ನಟರು (ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಕುರಿತು) ಗೌರವದಿಂದ ಇರಬೇಕು. ಇಲ್ಲವಾದಲ್ಲಿ ನಿಮ್ಮ ಆಸ್ತಿಯ ಬಗ್ಗೆ ವಿಚಾರಣೆ ನಡೆಸಲಾಗುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಹಾಕಿ' ಎಂದು ಮಾತನಾಡಿದ್ದಾರೆ. ಆ ಮೂಲಕ ಮತದಾರರಿಗೆ ಪ್ರಭಾವ ಬೀರಿದ್ದಾರೆ ಹಾಗೂ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಈ ಕುರಿತು ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ತನಿಖೆ ಪೂರ್ಣಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಚಿವ ಕೆ.ಸಿ.ನಾರಾಯಣ ಗೌಡ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.












Click it and Unblock the Notifications