ಬಿಎಸ್‌ವೈ ವಿರುದ್ಧದ 15 ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

Posted By:
Subscribe to Oneindia Kannada

ಬೆಂಗಳೂರು, ಜನವರಿ 05 : ಯಡಿಯೂರಪ್ಪ ಅವರ ವಿರುದ್ಧದ 15 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ರತ್ನಕಲಾ ಅವರ ಏಕಸದಸ್ಯ ಪೀಠದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. 2015ರ ಡಿಸೆಂಬರ್ 16ರಂದು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಲಾಗಿತ್ತು. ಮಂಗಳವಾರ ತೀರ್ಪು ಪ್ರಕಟಗೊಂಡಿದ್ದು, 15 ಎಫ್‌ಐಆರ್‌ಗಳನ್ನು ರದ್ದುಗೊಳಿಸಲಾಗಿದೆ. [ಯಡಿಯೂರಪ್ಪ, ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್]

yeddyurappa

ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ ಅವರು ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿಯ ಅನ್ವಯ ತಮ್ಮ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರುಗಳಲ್ಲಿ ಹುರುಳಿಲ್ಲ. ಆದ್ದರಿಂದ, ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು. [ಯಡಿಯೂರಪ್ಪ ವಿರುದ್ಧ ತನಿಖೆ : ತಡೆಯಾಜ್ಞೆ ತೆರವಿಗೆ ಸುಪ್ರೀಂ ನಕಾರ]

ದೂರಿನಲ್ಲಿ ಏನಿತ್ತು? : ಬೆಂಗಳೂರಿನ ಜೆ.ಪಿ.ನಗರ, ಎಚ್‌ಆರ್‌ಬಿಆರ್‌ ಲೇಔಟ್‌, ಜಯನಗರ 8ನೇ ಬ್ಲಾಕ್‌ ಮತ್ತು ರಾಚೇನಹಳ್ಳಿ ಸುತ್ತಮುತ್ತಲಿನ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ ಎಂಬುದು ಆರೋಪ.

ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿ ಆಧರಿಸಿ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಲು ಅವಕಾಶ ನೀಡಬೇಕು ಎಂದು ಜಯಕುಮಾರ್ 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರು ಸಕ್ಷಮ ತನಿಖಾ ಪ್ರಾಧಿಕಾರದಲ್ಲಿ ಇದನ್ನು ಪ್ರಶ್ನಿಸಬಹುದು ಎಂದು ಹೇಳಿತ್ತು.

ಈ ಆದೇಶದ ನಂತರ ಜಯಕುಮಾರ್ ಅವರು ಲೋಕಾಯುಕ್ತಕ್ಕೆ 2015ರಲ್ಲಿ ದೂರು ನೀಡಿದ್ದರು. ಲೋಕಾಯುಕ್ತ ಈ ದೂರಿನ ಪ್ರಾಥಮಿಕ ತನಿಖೆ ನಡೆಸುವಂತೆ ಸಿಐಡಿಗೆ ವಹಿಸಿತ್ತು. ಸಿಐಡಿ ವರದಿ ಬಂದ ಬಳಿಕ ಯಡಿಯೂರಪ್ಪ ಅವರ ವಿರುದ್ಧ 15 ಎಫ್‌ಐಆರ್‌ಗಳನ್ನು ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka High Court on Tuesday quashed 15 FIR registered against B.S.Yeddyurappa in denotification cases. Justice Rathnakala passed the order and quashed 15 FIR registered based on the report of Comptroller and Auditor General of India (CAG).
Please Wait while comments are loading...