ಖಾಸಗಿ ಶಾಲೆಗಳ ಶುಲ್ಕ ಬಹಿರಂಗ; ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು, ಜನವರಿ 30 : ಖಾಸಗಿ ಶಾಲೆಗಳು ಶುಲ್ಕವನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕು ಎಂಬ ಕರ್ನಾಟಕ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಜನವರಿ 31ರೊಳಗೆ ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಅಧಿಸೂಚನೆ ಹೇಳಿತ್ತು.

ಕರ್ನಾಟಕ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಶ್ರೀ ವಾಣಿ ವಿದ್ಯಾ ಕೇಂದ್ರ ಪ್ರಶ್ನೆ ಮಾಡಿತ್ತು. ಈ ಕುರಿತು ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರ 24 ಜುಲೈ 2019 ರಂದು ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡುವುದಿಲ್ಲ ಎಂದು ಹೇಳಿದೆ.

ಸರ್ಕಾರ ತನ್ನ ಅಧಿಸೂಚನೆಯಲ್ಲಿ ಎಲ್ಲಾ ಖಾಸಗಿ ಶಾಲೆಗಳು ಶುಲ್ಕ ಹಾಗೂ ವೆಚ್ಚವನ್ನು ಬಹಿರಂಗಗೊಳಿಸಬೇಕು. ಶುಲ್ಕದ ವಿವರ, ಲೆಕ್ಕಪರಿಶೋಧನೆ ವಿವರವನ್ನು ವೆಬ್‌ ಸೈಟ್‌ನಲ್ಲಿ ಜನವರಿ 31ರೊಳಗೆ ಪ್ರಕಟಿಸಬೇಕು ಎಂದು ಹೇಳಿತ್ತು.

ಕರ್ನಾಟಕ ಸರ್ಕಾರ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ವರ್ಗೀಕರಣ ಮತ್ತು ನಿಯಂತ್ರಣ) ಕಾಯ್ದೆ 1995ರ ನಿಯಮ 10 (4) ಹಾಗೂ 14 (2)ರ ಅನ್ವಯ ಎಲ್ಲಾ ಶಾಲೆಗಳ ಮುಂದೆ ಶುಲ್ಕದ ವಿವರ, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಅವರಿಗೆ ನೀಡುವ ವೇತನ ಇನ್ನಿತರ ಮಾಹಿತಿಯನ್ನು ಪ್ರಕಟಿಸಬೇಕು ಎಂದು ಹೇಳಿತ್ತು.

ಮೈತ್ರಿ ಸರ್ಕಾರವಿದ್ದಾಗ ಪ್ರಸ್ತಾಪ

ಮೈತ್ರಿ ಸರ್ಕಾರವಿದ್ದಾಗ ಪ್ರಸ್ತಾಪ

ಕರ್ನಾಟಕದಲ್ಲಿ ಮೈತ್ರಿ ಸರ್ಕಾರವಿದ್ದಾಗ ಖಾಸಗಿ ಶಾಲೆಗಳು ಶುಲ್ಕದ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಮನಬಂದಂತೆ ಶುಲ್ಕ ನಿಗದಿ ಮಾಡುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ರೀತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದ ನಿಯಮಾವಳಿ ಆಧರಿಸಿಯೇ ಖಾಸಗಿ ಶಾಲೆಗಳು ಶುಲ್ಕ ನಿಗದಿ ಮಾಡಬೇಕು. ತರಗತಿವಾರು ಶುಲ್ಕದ ವಿವರವನ್ನು ಶಾಲೆಗಳ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಕಡ್ಡಾಯ ಎಂದು ಸೂಚಿಸಲಾಗಿತ್ತು.

2015ರಲ್ಲಿಯೇ ಸುತ್ತೋಲೆ ಕೊಡಲಾಗಿತ್ತು

2015ರಲ್ಲಿಯೇ ಸುತ್ತೋಲೆ ಕೊಡಲಾಗಿತ್ತು

ಕರ್ನಾಟಕ ಸರ್ಕಾರ ಕರ್ನಾಟಕ ಶಿಕ್ಷಣ ಸಂಸ್ಥೆಗಳು (ವರ್ಗೀಕರಣ ಮತ್ತು ನಿಯಂತ್ರಣ) ಕಾಯ್ದೆ 1995ರ ನಿಯಮ 10 (4) ಹಾಗೂ 14 (2)ರ ಅನ್ವಯ ಶಾಲೆಗಳ ಸೂಚನಾ ಫಲಕದಲ್ಲಿ ಶುಲ್ಕದ ವಿವರ ಪ್ರಕಟಿಸಬೇಕು ಎಂದು 2015ರಲ್ಲಿಯೇ ಸುತ್ತೋಲೆ ಕೊಡಲಾಗಿದೆ. ಹಲವು ಶಾಲೆಗಳು ಇದನ್ನು ಪಾಲಿಸುತ್ತಿಲ್ಲ. ಹೀಗಾಗಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶ ನೀಡಬೇಕು ಎಂದು ಹೈಕೋರ್ಟ್‌ಗೆ ದೂರು ಸಲ್ಲಿಕೆಯಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ್ದ ಶಾಲೆ

ಹೈಕೋರ್ಟ್ ಮೆಟ್ಟಿಲೇರಿದ್ದ ಶಾಲೆ

ಕರ್ನಾಟಕ ಸರ್ಕಾರದ ಸುತ್ತೋಲೆ ಮತ್ತು ದೂರು ದಾಖಲಾದ ಬಳಿಕ ಹೈಕೋರ್ಟ್‌ನಲ್ಲಿ ಶ್ರೀ ವಾಣಿ ವಿದ್ಯಾ ಕೇಂದ್ರ ರಿಟ್ ಅರ್ಜಿ ಸಲ್ಲಿಸಿತ್ತು. ವೆಬ್ ಸೈಟ್‌ನಲ್ಲಿ ಶುಲ್ಕ ಪ್ರಕಟಿಸಲು ಮೊದಲು 2019ರ ಡಿಸೆಂಬರ್‌ 31ರ ಗಡುವು ನೀಡಲಾಗಿತ್ತು. ಬಳಿಕ ಗಡುವನ್ನು ಜನವರಿ 31ರ ತನಕ ವಿಸ್ತರಣೆ ಮಾಡಲಾಗಿತ್ತು.

ಹೇಗೆ ಪ್ರಕಟಿಸಬೇಕು?

ಹೇಗೆ ಪ್ರಕಟಿಸಬೇಕು?

ಪೂರ್ವ ಪ್ರಾಥಮಿಕದಿಂದ ಪಿಯು ವರೆಗೆ ಬೋಧನಾ ಶುಲ್ಕ, ಅವಧಿ ಶುಲ್ಕ, ವಿಶೇಷ ಅಭಿವೃದ್ಧಿ ಶುಲ್ಕ ಸೇರಿ ಒಟ್ಟಾರೆ ಶುಲ್ಕದ ಮಾಹಿತಿ ಪ್ರಕಟಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ರಾಜ್ಯದಲ್ಲಿ 19, 645 ಖಾಸಗಿ ಶಾಲೆಗಳಿದ್ದು, ಇದರಲ್ಲಿ 45.71 ಲಕ್ಷ ವಿದ್ಯಾರ್ಥಿಗಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+