ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಅರ್ಜಿ ವಿಚಾರಣೆ ಪೂರ್ಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡಬೇಕು ಎಂದು ಡಿ. ಕೆ. ಶಿವಕುಮಾರ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

ಡಿಕೆಶಿ ಪುತ್ರಿ ಐಶ್ವರ್ಯಾಗೆ ಡಿಕೆ ಸುರೇಶ್ ಕೊಟ್ಟ ಸಾಲವೇ 'ಇಡಿ' ಗೆ ಆಸ್ತ್ರಡಿಕೆಶಿ ಪುತ್ರಿ ಐಶ್ವರ್ಯಾಗೆ ಡಿಕೆ ಸುರೇಶ್ ಕೊಟ್ಟ ಸಾಲವೇ 'ಇಡಿ' ಗೆ ಆಸ್ತ್ರ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಹೆಸರು ಕೈ ಬಿಡಲು ನಿರಾಕರಿಸಿತ್ತು. ಈ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಮಾಜಿ ಸಚಿವರು ಪ್ರಶ್ನೆ ಮಾಡಿದ್ದಾರೆ.

ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್ ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್

high court

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್‌ರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅಕ್ಟೋಬರ್ 14ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಹೈಕೋರ್ಟ್‌ನಲ್ಲಿಯೂ ಡಿಕೆ ಶಿವಕುಮಾರ್‌ಗೆ ನಿರಾಸೆಹೈಕೋರ್ಟ್‌ನಲ್ಲಿಯೂ ಡಿಕೆ ಶಿವಕುಮಾರ್‌ಗೆ ನಿರಾಸೆ

ಇಡಿ ಡಿ. ಕೆ. ಶಿವಕುಮಾರ್‌ರನ್ನು ನವದೆಹಲಿಯಲ್ಲಿ ಬಂಧಿಸಿದೆ. ಆದ್ದರಿಂದ, ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 14ರಂದು ಅರ್ಜಿಯ ಕುರಿತು ವಿಚಾರಣೆ ನಡೆಯಲಿದ್ದು, ಜಾಮೀನು ಸಿಗುವುದೇ? ಕಾದು ನೋಡಬೇಕು.

ಇಡಿ ವಿಶೇಷ ನ್ಯಾಯಾಲಯದಲ್ಲಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಈಗ ಜಾಮೀನಿಗಾಗಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಪರವಾಗಿ ಕೆ. ಎಂ. ನಟರಾಜ್ ವಾದ ಮಂಡನೆ ಮಾಡುತ್ತಿದ್ದಾರೆ.

English summary
Karnataka high court reserved the judgment on former minister DK Shivakumar petition. DK Shivakumar seeks to drop his name from money laundering case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X