RTI ಮೂಲಕ ಪೊಲೀಸ್ ತನಿಖಾ ವರದಿ ಪಡೆಯಲು ಅವಕಾಶ: ಕರ್ನಾಟಕ ಹೈಕೋರ್ಟ್
ಬೆಂಗಳೂರು, ಅಕ್ಟೋಬರ್ 13: ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯ ಪ್ರತಿಯನ್ನು ಆರ್‌ಟಿಐ ಅಡಿಯಲ್ಲಿ ನೀಡುವಂತೆ ರಾಜ್ಯ ಮಾಹಿತಿ ಹಕ್ಕು ಆಯೋಗ ನೀಡಿದ ಆದೇಶವನ್ನು ಪ್ರಶ್ನಿಸಿ ಅಪರಾಧ ತನಿಖಾ ವಿಭಾಗದ (ಸಿಐಡಿ) ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ನೇತೃತ್ವದ ಏಕ ಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.
ತನಿಖಾ ಹಂತದಲ್ಲಿ ಯಾವುದೇ ಪ್ರಕರಣದ ಮಾಹಿತಿಯನ್ನು ನೀಡಲು ನಿರ್ಬಂಧವಿದೆ. ಆದರೆ, ತನಿಖೆಯ ಪೂರ್ಣಗೊಂಡ ನಂತರ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಬಹುದಾಗಿದೆ. ಈ ಕುರಿತು ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರು ನೀಡಿದ ಆದೇಶವು ನ್ಯಾಯಸಮ್ಮತವಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಸಿಐಡಿ ಪೊಲೀಸರು ಪ್ರಕರಣವೊಂದರ ಸಂಬಂಧ ತನಿಖೆ ನಡೆಸಿ ಅಧೀನ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿದ್ದರು. ಬಿ ವರದಿ ಪ್ರತಿ ಒದಗಿಸುವಂತೆ ಕೋರಿ ಧಾರವಾಡದ ಮಲ್ಲೇಶಪ್ಪ ಎಂ.ಚಿಕ್ಕೇರಿ ಎಂಬುವರು ಸಿಐಡಿಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರು. ಆದರೆ, ತನಿಖಾ ವರದಿಯನ್ನು ನೀಡಲು ಸಾಧ್ಯವಿಲ್ಲ ಎಂದು ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ತಿಳಿಸಿದ್ದರು.
ಹೀಗಾಗಿ, ಮಲ್ಲೇಶಪ್ಪ ಅವರು ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿದ್ದ ಆಯೋಗದ ಆಯುಕ್ತರು, ಮಲ್ಲೇಶಪ್ಪ ಅವರ ಕೋರಿಕೆಯಂತೆ ತನಿಖಾ ವರದಿಯ ಪ್ರತಿ ಒದಗಿಸುವಂತೆ ಸಿಐಡಿಗೆ ಸೂಚಿಸಿ ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಪ್ರಕರಣವೊಂದರಲ್ಲಿ ಸಿಐಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಹಿನ್ನೆಲೆ ತನಿಖಾ ವರದಿ ಕೇಳಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ್ದ ಸಿಐಡಿ ಮಾಹಿತಿ ಅಧಿಕಾರಿ ಬಿ ರಿಪೋರ್ಟ್ ವರದಿ ಪ್ರತಿ ನೀಡಲು ನಿರಾಕರಿಸಿದ್ದರು.
ನಂತರ ಮಾಹಿತಿ ಹಕ್ಕು ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಮಾಹಿತಿ ಹಕ್ಕು ಆಯೋಗ ಮಾಹಿತಿ ನೀಡುವಂತೆ ಆದೇಶಿಸಿತ್ತು. ಮಾಹಿತಿ ಹಕ್ಕು ಆಯೋಗದ ಈ ಆದೇಶ ಪ್ರಶ್ನಿಸಿ ಸಿಐಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿತ್ತು.
ಸಿಐಡಿಯ ರಿಟ್ ಅರ್ಜಿ ವಜಾಗೊಳಿಸಿರುವ ನ್ಯಾ. ಎನ್ ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿ ಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧ ಇದೆ. ಆದರೆ, ತನಿಖೆ ಪೂರ್ಣಗೊಂಡ ಬಳಿಕ ಆರ್‌ಟಿಐ ಕಾಯ್ದೆ ಅಡಿ ಮಾಹಿತಿ ಪಡೆಯಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಪೊಲೀಸರ ತನಿಖಾ ವರದಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಡೆಯುವ ಹಕ್ಕಿದೆ ಎಂದು ಹೈಕೋರ್ಟ್ ಸಾರಿದೆ. ಕೇಸ್‌ವೊಂದರಲ್ಲಿ CID ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು.
ಆದರೆ ಸಿಐಡಿ ಮಾಹಿತಿ ಅಧಿಕಾರಿಯು ಮಾಹಿತಿ ಹಕ್ಕಿನಡಿ ಬಿ ರಿಪೋರ್ಟ್ ಪ್ರತಿ ನೀಡಲು ನಿರಾಕರಿಸಿದ್ದರು. ಆಗ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯೋಗ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಾಹಿತಿ ಅಧಿಕಾರಿ ರಿಟ್ ಅರ್ಜಿ ಸಲ್ಲಿಸಿದ್ದರು.
ಇದೀಗ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧವಿದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಮಾಹಿತಿ ಪಡೆಯಬಹುದು ಎಂದು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
ಆ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಆರ್‌ಟಿಐ ಅಡಿಯಲ್ಲಿ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಪಡೆಯುವ ಹಕ್ಕು ಇದೆ ಎಂದು ಆದೇಶಿಸಿದೆ. ಮಾಹಿತಿ ಕೃಪೆ( ಬಾರ್ & ಬೆಂಚ್)












Click it and Unblock the Notifications