• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಾಧು ಕೋಕಿಲ ವಿರುದ್ಧದ ಲೈಂಗಿಕ ಕಿರುಕುಳ ಕೇಸಿಗೆ ತಡೆ

|
   ಲೈಂಗಿಕ ಕಿರಿಕುಳ ಕೇಸ್ ನಲ್ಲಿ ಹೈ ಕೋರ್ಟ್ ಸಾಧುಕೋಕಿಲ ಗೆ ಹೇಳಿದ್ದೇನು ಗೊತ್ತಾ..?

   ಬೆಂಗಳೂರು, ಡಿಸೆಂಬರ್ 09: ನಟ, ನಿರ್ದೇಶಕ, ಸಂಗೀತಗಾರ ಸಾಧುಕೋಕಿಲ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದಕ್ಕೂ ಮುನ್ನ ಅಕ್ಟೋಬರ್ ತಿಂಗಳಿನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಮಾಡಿತ್ತು.

   ತಮ್ಮ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ರದ್ದುಪಡಿಸುವಂತೆ ಕೋರಿ ಸಾಧುಕೋಕಿಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ, ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು.

   ಸಾಧು ಕೋಕಿಲ ಅತ್ಯಾಚಾರ ಆರೋಪ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ಸಾಧು ಕೋಕಿಲ ಅತ್ಯಾಚಾರ ಆರೋಪ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್

   ಸಾಧುಕೋಕಿಲ ವಿರುದ್ಧ ಸಂಗ್ರಹಿಸಿರುವ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಲಾಗಿತ್ತು. ಈ ಪ್ರಕರಣದಲ್ಲಿ ತಾವು ತಪ್ಪಿತಸ್ಥರಲ್ಲ. ತಮಗೆ ಕಳಂಕ ತರಲು ಈ ಆರೋಪ ಮಾಡಲಾಗಿದೆ ಎಂದು ಸಾಧು ಕೋಕಿಲ ಸ್ಪಷ್ಟನೆ ನೀಡಿದ್ದರು.

    ಮಂಡ್ಯ ರಮೇಶ್, ಸಾಧುಕೋಕಿಲ ಮೇಲೆ ಲೈಂಗಿಕ ಶೋಷಣೆ ಆರೋಪ! ಮಂಡ್ಯ ರಮೇಶ್, ಸಾಧುಕೋಕಿಲ ಮೇಲೆ ಲೈಂಗಿಕ ಶೋಷಣೆ ಆರೋಪ!

   ಮೈಸೂರಿನ ಮಸಾಜ್ ಪಾರ್ಲರ್ ವೊಂದರಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ಘನತೆ ಧಕ್ಕೆ ತಂದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಜಿ ನರೇಂದರ್ ಅವರಿದ್ದ ನ್ಯಾಯಪೀಠವು, ಅರ್ಜಿದಾರರ ವಿರುದ್ಧ ಆರೋಪ ಸಾಬೀತುಪಡಿಸುವಂಥ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಅಧೀನ ಕೋರ್ಟ್ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

   2017ರಲ್ಲಿ ಮಸಾಜ್ ಸೆಂಟರ್‌ ಮೇಲೆ ದಾಳಿ

   2017ರಲ್ಲಿ ಮಸಾಜ್ ಸೆಂಟರ್‌ ಮೇಲೆ ದಾಳಿ

   2017ರಲ್ಲಿ ಮಸಾಜ್ ಸೆಂಟರ್‌ವೊಂದರ ಯುವತಿ ನಟರಾದ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ಧ ಆರೋಪ ಮಾಡಿದ್ದರು. ಸ್ಪಾಗೆ ಬಂದು ಮಸಾಜ್ ಮಾಡಿಸಿಕೊಳ್ಳುತ್ತಿದ್ದ ನಟರಿಬ್ಬರೂ ತಮ್ಮನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದರು ಎಂದು ಆಕೆ ಆರೋಪಿಸಿದ್ದರು. ಪಾರ್ಲರ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಬಂದು ಪುರುಷರಿಗೆ ಮಸಾಜ್ ಮಾಡುವಂತೆ ಬಲವಂತ ಮಾಡಲಾಗುತ್ತಿತ್ತು. ಇಬ್ಬರೂ ನಟರಿಗೆ ಎರಡು ಬಾರಿ ಬಾಡಿ ಮಸಾಜ್ ಮಾಡಿದ್ದೇನೆ. ಆ ಸಂದರ್ಭದಲ್ಲಿ ಅವರು ಲೈಂಗಿಕ ಕಿರುಕುಳ ನೀಡಿದ್ದರು. ಅಲ್ಲದೆ ಲೈಂಗಿಕ ಸುಖ ನೀಡುವಂತೆ ಹಣದ ಆಮಿಷ ಕೂಡ ಒಡ್ಡಿದ್ದರು ಎಂದು ಆರೋಪಿಸಿದ್ದರು. ಈ ಆರೋಪವನ್ನು ಮಂಡ್ಯ ರಮೇಶ್ ಕೂಡ ತಳ್ಳಿಹಾಕಿದ್ದರು. ಆ ಸ್ಪಾ ಉದ್ಘಾಟನೆ ಮಾಡಿದ್ದು ನಾನೇ. ಆದರೆ ಆ ಯುವತಿ ಯಾರೆಂದು ನನಗೆ ತಿಳಿದೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು.

   ಇಬ್ಬರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ

   ಇಬ್ಬರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ

   ಮೈಸೂರಿನ ಮಸಾಜ್ ಪಾರ್ಲರ್‌ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. 2017ರ ಅ. 20ರಂದು ಮೈಸೂರಿನ ಸರಸ್ವತಿಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಾಧು ಕೋಕಿಲ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ತನಿಖಾಧಿಕಾರಿಗಳು ಅಧೀನ ಕೋರ್ಟಿಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

   ಪ್ರಕರಣ ರದ್ದುಗೊಳಿಸಬೇಕು ಎಂದಿದ್ದ ಸಾಧು

   ಪ್ರಕರಣ ರದ್ದುಗೊಳಿಸಬೇಕು ಎಂದಿದ್ದ ಸಾಧು

   ತಮ್ಮ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ತಮ್ಮ ತೇಜೋವಧೆಗೆ ಪ್ರಯತ್ನಿಸಲಾಗುತ್ತಿದೆ. ಪೊಲೀಸರು ಕಾನೂನಿಗೆ ಅನುಗುಣವಾಗಿ ತನಿಖೆಯನ್ನೇ ನಡೆಸಿಲ್ಲ. ನಾನು ಅಲ್ಲಿಗೆ ಭೇಟಿಯನ್ನೇ ನೀಡಿಲ್ಲ ಎಂದ ಮೇಲೆ ಕೂಡ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಹಾಗಾಗಿ ಈ ಪ್ರಕರಣ ರದ್ದುಗೊಳಿಸಬೇಕು ಎಂದು ಸಾಧುಕೋಕಿಲ ಕೋರಿದ್ದಾರೆ.

   ಸಂತ್ರಸ್ತರ ವಾದವೇನು?

   ಸಂತ್ರಸ್ತರ ವಾದವೇನು?

   2017ರ ಡಿಸೆಂಬರ್ 20ರಂದು ಮೈಸೂರಿನ ಸ್ವಾಮಿ ಆರ್ಕೆಡ್ ಕಟ್ಟಡದಲ್ಲಿರುವ ಲೈಕ್ ಟ್ರೆಂಡ್ ಫ್ಯಾಮಿಲಿ ಸಲೂನ್ ಮೇಲೆ ಸರಸ್ವತಿಪುರ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಮಾಲೀಕ ರಾಜೇಶ್ ಇದ್ದರು. ಸ್ಪಾಗೆ ಬರುವ ಗ್ರಾಹಕರಿಗೆ ಬೇಡಿಕೆ ಮೇರೆಗೆ ಮಸಾಜ್ ಮಾಡಬೇಕಾಗುತ್ತದೆ. ಇಬ್ಬರು ನಟರಿಗೆ ಎರಡು ಬಾರಿ ಬಾಡಿ ಮಸಾಜ್ ಮಾಡಿದ್ದೇನೆ. ಆ ಸಂದರ್ಭದಲ್ಲಿ ಅವರು ಲೈಂಗಿಕ ಕಿರುಕುಳ ನೀಡಿದ್ದರು, ಬಲವಂತವಾಗಿ ಲೈಂಗಿಕ ಸುಖ ನೀಡುವಂತೆ ಆಗ್ರಹಿಸಿದ್ದರು ಎಂದು ಮಹಿಳಾ ಸಿಬ್ಬಂದಿ ದೂರಿದ್ದರು.

   English summary
   Karnataka High Court issued a interim stay on probe on rape allegation case against actor Sadhu Kokila.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X