ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಭಾಗ್ಯವಿಲ್ಲ?

ಬೆಂಗಳೂರು, ಮಾರ್ಚ್ 18; ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಈ ವರ್ಷವೂ ಸಹ ಸೈಕಲ್ ಭಾಗ್ಯವಿಲ್ಲ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಪ್ರಸ್ತಾವನೆಗೆ ಇನ್ನು ಒಪ್ಪಿಗೆ ಸಿಕ್ಕಿಲ್ಲ.

2022-23ನೇ ಸಾಲಿನ ಶೈಕ್ಷಣಿಕ ವರ್ಷ ಮೇ 16ರಿಂದ ಆರಂಭವಾಗಲಿದೆ. ಆದರೆ ಸರ್ಕಾರದ ಒಪ್ಪಿಗೆ ಸಿಗದ ಕಾರಣ ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ತುಳಿಯುವ ಭಾಗ್ಯವಿಲ್ಲ. ಕರ್ನಾಟಕ ಸರ್ಕಾರ 2006-07ನೇ ಸಾಲಿನಲ್ಲಿ ಸೈಕಲ್ ನೀಡುವ ಯೋಜನೆ ಆರಂಭಿಸಿತ್ತು.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಗೆ 792 ಕೋಟಿ ರೂ. ಬೇಕು ಎಂದು ಅಂದಾಜಿಸಲಾಗಿದೆ. ಅಂದಾಜು ವೆಚ್ಚ ಸೇರಿದಂತೆ ಯೋಜನೆ ವಿವರಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಣಕಾಸು ಇಲಾಖೆಗೆ ಕಳುಹಿಸಿದೆ. ಆದರೆ ಪ್ರತಿಕ್ರಿಯೆ ಬಂದಿಲ್ಲ.

High School Students Likely To Miss Free Bicycles This Year Too

ಒಂದು ವೇಳೆ ಇಲಾಖೆ ಪ್ರಸ್ತಾವನೆಯನ್ನು ತಿರಸ್ಕಾರ ಮಾಡಿದರೆ ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವುದಿಲ್ಲ. ಕೋವಿಡ್ ಪರಿಸ್ಥಿತಿಯ ಕಾರಣ ಕಳೆದ ಎರಡು ವರ್ಷಗಳಿಂದ ಸೈಕಲ್ ವಿತರಣೆ ಮಾಡಿಲ್ಲ.

2006-07ರಲ್ಲಿ ಯೋಜನೆ ಆರಂಭವಾದಾಗ ವಿದ್ಯಾರ್ಥಿನಿಯರಿಗೆ ಮಾತ್ರ ಸೈಕಲ್ ನೀಡಲಾಗುತ್ತಿತ್ತು. ಬಳಿಕ ಪೋಷಕರ ಒತ್ತಾಯದ ಮೇರೆಗೆ ವಿದ್ಯಾರ್ಥಿಗಳಿಗೂ ಸೈಕಲ್ ವಿತರಣೆ ಮಾಡಲು ಆರಂಭಿಸಲಾಯಿತು.

ಆದರೆ ಈ ಯೋಜನೆಯಿಂದ ಬೆಂಗಳೂರು ಉತ್ತರ, ದಕ್ಷಿಣ ಶೈಕ್ಷಣಿಕ ಜಿಲ್ಲೆಗಳು. ಧಾರಡವಾ, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳು ಹೊರಗುಳಿದಿವೆ.

ಉಚಿತ ಸೈಕಲ್ ವಿತರಣೆ; ಕರ್ನಾಟಕ ಸರ್ಕಾರ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು 2006-07ರಲ್ಲಿ ಆರಂಭಿಸಿತು. ದೂರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಸೇರಿದ ಮತ್ತು ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ 8 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಮೊದಲು ಸೈಕಲ್ ವಿತರಿಸಲಾಯಿತು.

ಬಳಿಕ 8ನೇ ತರಗತಿಯ ಎಲ್ಲಾ ಹುಡುಗಿಯರು ಮತ್ತು ಹುಡುಗರಿಗೆ ವಿತರಣೆ ಮಾಡಲು ಆರಂಭಿಸಲಾಯಿತು. ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಲು ಪ್ರೋಹ್ಸಾಹಿಸುವುದು. ಶಾಲೆಗೆ ತಡವಾಗಿ ಬರುವುದನ್ನು ತಪ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು.

2017-18ರಲ್ಲಿ 2,47,955 ಬಾಲಕಿಯರಿಗೆ ಮತ್ತು 2,57,941 ಬಾಲಕರಿಗೆ ಸೇರಿ ಒಟ್ಟು 5,05,896 ಸೈಕಲ್‌ಗಳನ್ನು ವಿತರಿಸಲಾಗಿದೆ. ಇದಕ್ಕಾಗಿ 172 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಸೈಕಲ್ ಜೊತೆ ಪ್ರತಿ ಶಾಲೆಗೆ ಟೂಲ್ ಕಿಟ್ ಸಹ ಒದಗಿಸಲಾಗಿದೆ ಮತ್ತು ಪ್ರತಿ ಸೈಕಲ್‌ಗೆ 5 ವರ್ಷಗಳ ವಾರೆಂಟಿ ಇದೆ.

ಯಾರಿಗೆ ಸೈಕಲ್ ಕೊಡುವುದಿಲ್ಲ; ಬಸ್ ಪಾಸ್ ಹೊಂದಿದ ಹಾಗೂ ಹಾಸ್ಟೆಲ್ ಸೌಲಭ್ಯ ಪಡೆದ ಹೆಣ್ಣು ಮಕ್ಕಳಿಗೆ ಸೈಕಲ್ ನೀಡುವುದಿಲ್ಲ. 2007-08ನೇ ಸಾಲಿನಿಂದ ಈ ಯೋಜನೆಯನ್ನು ನಗರ ಪ್ರದೇಶದ ಬಿಪಿಎಲ್ ಕುಟುಂಬದ ಹೆಣ್ಣು, ಗಂಡು ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.

ಶಾಲೆಗಳಿಗೆ ಹೆಣ್ಣು ಮಕ್ಕಳ ದಾಖಲಾತಿಯನ್ನು ಉತ್ತೇಜಿಸುವುದು. ಮಕ್ಕಳು ದೂರದಲ್ಲಿರುವ ಶಾಲೆಯನ್ನು ತಲುಪಲು ಅನುಕೂಲ ಮಾಡುವುದು. ಮಕ್ಕಳ ಕಲಿಕೆ ಹಾಗೂ ಉಳಿಯುವಿಕೆಯನ್ನು ಉತ್ತಮ ಪಡಿಸುವುದು. ಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದು ಮತ್ತು ಪ್ರಯಾಣದ ವೇಳೆಯನ್ನು ತಗ್ಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸೈಕಲ್ ಬದಲು ಬಸ್ ಪಾಸ್?: ಕಳೆದ ಎರಡು ವರ್ಷಗಳಿಂದ ಸೈಕಲ್ ವಿತರಣೆ ಮಾಡಿಲ್ಲ. ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಒಂದು ವೇಳೆ ಸೈಕಲ್ ನೀಡಲು ಸಾಧ್ಯವಾಗದಿದ್ದರೆ ಸೈಕಲ್‌ಗೆ ನೀಡುವ ಹಣದಲ್ಲಿ ಬಸ್ ಪಾಸ್ ವ್ಯವಸ್ಥೆ ಮಾಡಿ ಎಂದು ಶಿಕ್ಷಕರು ನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+