ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಾಹಕ್ಕೆ ಗುನ್ನ ಕೊಟ್ಟ ಸರ್ಕಾರ
ಬೆಂಗಳೂರು, ನ. 09: ರಾಜ್ಯದಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ ನಾನಾ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಾಹಕ್ಕೆ ಬ್ರೇಕ್ ಬಿದ್ದಿದೆ. ಇಂಜಿನಿಯರಿಂಗ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸಂಗ್ರಹಿಸಲಿದೆ. ಸಮವಸ್ತ್ರ ಶುಲ್ಕ, ಕಾಲೇಜು ಅಭಿವೃದ್ಧಿ ಶುಲ್ಕಕ್ಕೂ ಕಡಿವಾಣ ಹಾಕಿದೆ.
ರಾಜ್ಯದಲ್ಲಿ ಖಾಸಗಿ ಹಾಗೂ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ನಿಗದಿ ಪಡಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 62,073 ರೂ. ನಿಗದಿ ಮಾಡಲಾಗಿದೆ.
ವಿಶ್ವವಿದ್ಯಾಲಯದ ಅಧಿನಿಯಮದ ಪ್ರಕಾರ ರಾಜ್ಯದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ಶೇ. 40 ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾದಡಿ ಮೀಸಲಿಡಲಾಗುತ್ತದೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ನಿಗದಿ ಪಡಿಸಲಾಗುತ್ತದೆ. ಅದರಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಜಿನಿಯರಿಂಗ್ ಪದವಿ ಶಾಲಾ ಶುಲ್ಕ ನಿಗದಿ ಮಾಡಲಾಗಿದೆ. ಈ ಕುರಿತ ಅಧಿಕೃತ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಹೊರಡಿಸಿದೆ.

2021- 22ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಖಾಸಗಿ ವಿಶ್ವ ವಿದ್ಯಾಲಯಗಳು ವಿದ್ಯಾರ್ಥಿಗಳಿಂದ ಒದಗಿಸುವ ಸ್ಕಿಲ್ ಲ್ಯಾಬ್ ಸೌಲಭ್ಯ, ಗುಣಮಟ್ಟದ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ದೃಢೀಕರಿಸಿ ಮಾಡಲಾಗುವ ಶಿಫಾರಸು ಅನ್ವಯ ಪ್ರತಿ ವಿದ್ಯಾರ್ಥಿಗೆ ಹತ್ತು ಸಾವಿರ ರೂ. ಅಥವಾ ಹದಿನೈದು ಸಾವಿರ ಅಥವಾ 20 ಸಾವಿರ ರೂ.ವಷ್ಟೇ ಪಡೆಯಬೇಕು.
ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಬೋಧನಾ ಶುಲ್ಕ ವಿಶ್ವ ವಿದ್ಯಾಲಯದ ಶುಲ್ಕ, ಇತರೆ ಶುಲ್ಕವನ್ನು ಪ್ರತಿ ವಿದ್ಯಾರ್ಥಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಪಡೆಯಬೇಕು. ಈ ಕುರಿತು ಪರೀಕ್ಷಾ ಪ್ರಾಧಿಕಾರ ಮೊದಲೇ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು. ಕೌನ್ಸಲಿಂಗ್ ಪೂರ್ಣಗೊಂಡ ಎರಡು ತಿಂಗಳ ಬಳಿಕ ವಿಶ್ವ ವಿದ್ಯಾಲಯ ಶುಲ್ಕ, ಬೋಧನಾ ಶುಲ್ಕ ಸ್ಕಿಲ್ ಲ್ಯಾಬ್ ಶುಲ್ಕಗಳನ್ನು ಸಂಬಂಧಪಟ್ಟ ವಿಶ್ವ ವಿದ್ಯಾಲಯ, ಕಾಲೇಜುಗಳಿಗೆ ವರ್ಗಾಯಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವೃತ್ತಿಪರ ಕೋರ್ಸ್ ಗಳಿಗೆ ಕೌನ್ಸಲಿಂಗ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ಮೇಲಿನ ಶುಲ್ಕ ಪಾವತಿಸಿದ ಬಳಿಕ ಖಾಸಗಿ ವಿಶ್ವ ವಿದ್ಯಾಲಯಗಳು ಇತರೆ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ.
ಪ್ರವೇಶಕಾತಿ ಪಡೆದ ವಿದ್ಯಾರ್ಥಿಗಳು ಒಂದು ವೇಳೆ ವಿದ್ಯಾಭ್ಯಾಸ ಮೊಟಕುಗೊಳಿಸಿದಲ್ಲಿ, ವಿದ್ಯಾರ್ಥಿಗಳು ಪ್ರವೇಶ ಸಂದರ್ಭದಲ್ಲಿ ಸಂಸ್ಥೆಗೆ ಸಲ್ಲಿಸಲ್ಪಟ್ಟ ಮೂಲ ದಾಖಲೆ ಹಾಗೂ ಬೋಧನಾ ಶುಲ್ಕವನ್ನು ತಕ್ಷಣವೇ ವಿಶ್ವ ವಿದ್ಯಾಲಯಗಳು ಹಿಂತಿರುಗಿಸಬೇಕು. 2021-22 ನೇ ಸಾಲಿನ ಇಂಜಿನಿಯರಿಂಗ್ ಪದವಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ನಿಗದಿಯನ್ನು ಈ ಆದೇಶದ ಅನ್ವಯ ಖಾಸಗಿ ವಿಶ್ವ ವಿದ್ಯಾಲಯಗಳು ಅನುಷ್ಠಾನ ಮಾಡಬೇಕು ಎಂದು ಸೂಚಿಸಲಾಗಿದೆ.

ಸರ್ಕಾರಿ ಕೋಟಾದಡಿ ಖಾಸಗಿ ವಿಶ್ವ ವಿದ್ಯಾಲಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಪ್ರವೇಶಕಾತಿ ಪಡೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಪ್ರಸಕ್ತ ಸಾಲಿನಲ್ಲಿ ಕನಿಷ್ಠ 15 ರಿಂದ 25 ರಷ್ಟು ಹೆಚ್ಚಳ ಮಾಡುವಂತೆ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ನೇತೃತ್ವದ ಕಮಿಟಿ ಶಿಫಾರಸು ಮಾಡಿತ್ತು. ಆದರೆ ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.
ಸರ್ಕಾರಿ ಕೋಟಾದಡಿ ವೃತ್ತಿಪರ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಕಳೆದ ವರ್ಷ ಇರುವ ಶುಲ್ಕವನ್ನು ಮುಂದುವರೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಅದರಂತೆ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ನಿಗದಿ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
Recommended Video
ರಾಜ್ಯದಲ್ಲಿ ಈ ಭಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ವಿಚಾರದಲ್ಲಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸಂಗ್ರಹಿಸಲಿದೆ. ಸ್ಕಿಲ್ ಲ್ಯಾಬ್ ಶುಲ್ಕವನ್ನು ನಿಗದಿ ಪಡಿಸಿ ವಿದ್ಯಾರ್ಥಿಗಳ ಆಯ್ಕೆಗೆ ಅವಕಾಶ ನೀಡಲಾಗಿದೆ. ಮಿಗಿಲಾಗಿ ಸಮವಸ್ತ್ರ, ಶಾಲಾ ಅಭಿವೃದ್ಧಿ ಶುಲ್ಕವನ್ನು ನಿಗದಿ ಪಡಿಸಿದ್ದು, ಅದನ್ನು ಮೀರಿ ಖಾಸಗಿ ಕಾಲೇಜುಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications