ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಾಹಕ್ಕೆ ಗುನ್ನ ಕೊಟ್ಟ ಸರ್ಕಾರ

|
Google Oneindia Kannada News

ಬೆಂಗಳೂರು, ನ. 09: ರಾಜ್ಯದಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ ನಾನಾ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಾಹಕ್ಕೆ ಬ್ರೇಕ್ ಬಿದ್ದಿದೆ. ಇಂಜಿನಿಯರಿಂಗ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸಂಗ್ರಹಿಸಲಿದೆ. ಸಮವಸ್ತ್ರ ಶುಲ್ಕ, ಕಾಲೇಜು ಅಭಿವೃದ್ಧಿ ಶುಲ್ಕಕ್ಕೂ ಕಡಿವಾಣ ಹಾಕಿದೆ.

ರಾಜ್ಯದಲ್ಲಿ ಖಾಸಗಿ ಹಾಗೂ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ನಿಗದಿ ಪಡಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 62,073 ರೂ. ನಿಗದಿ ಮಾಡಲಾಗಿದೆ.

ವಿಶ್ವವಿದ್ಯಾಲಯದ ಅಧಿನಿಯಮದ ಪ್ರಕಾರ ರಾಜ್ಯದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ಶೇ. 40 ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾದಡಿ ಮೀಸಲಿಡಲಾಗುತ್ತದೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ನಿಗದಿ ಪಡಿಸಲಾಗುತ್ತದೆ. ಅದರಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಜಿನಿಯರಿಂಗ್ ಪದವಿ ಶಾಲಾ ಶುಲ್ಕ ನಿಗದಿ ಮಾಡಲಾಗಿದೆ. ಈ ಕುರಿತ ಅಧಿಕೃತ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಹೊರಡಿಸಿದೆ.

Higher Education Department Fixed Government Quota Seats fees for Engineering Courses

2021- 22ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಖಾಸಗಿ ವಿಶ್ವ ವಿದ್ಯಾಲಯಗಳು ವಿದ್ಯಾರ್ಥಿಗಳಿಂದ ಒದಗಿಸುವ ಸ್ಕಿಲ್ ಲ್ಯಾಬ್ ಸೌಲಭ್ಯ, ಗುಣಮಟ್ಟದ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ದೃಢೀಕರಿಸಿ ಮಾಡಲಾಗುವ ಶಿಫಾರಸು ಅನ್ವಯ ಪ್ರತಿ ವಿದ್ಯಾರ್ಥಿಗೆ ಹತ್ತು ಸಾವಿರ ರೂ. ಅಥವಾ ಹದಿನೈದು ಸಾವಿರ ಅಥವಾ 20 ಸಾವಿರ ರೂ.ವಷ್ಟೇ ಪಡೆಯಬೇಕು.

ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಬೋಧನಾ ಶುಲ್ಕ ವಿಶ್ವ ವಿದ್ಯಾಲಯದ ಶುಲ್ಕ, ಇತರೆ ಶುಲ್ಕವನ್ನು ಪ್ರತಿ ವಿದ್ಯಾರ್ಥಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಪಡೆಯಬೇಕು. ಈ ಕುರಿತು ಪರೀಕ್ಷಾ ಪ್ರಾಧಿಕಾರ ಮೊದಲೇ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು. ಕೌನ್ಸಲಿಂಗ್ ಪೂರ್ಣಗೊಂಡ ಎರಡು ತಿಂಗಳ ಬಳಿಕ ವಿಶ್ವ ವಿದ್ಯಾಲಯ ಶುಲ್ಕ, ಬೋಧನಾ ಶುಲ್ಕ ಸ್ಕಿಲ್ ಲ್ಯಾಬ್ ಶುಲ್ಕಗಳನ್ನು ಸಂಬಂಧಪಟ್ಟ ವಿಶ್ವ ವಿದ್ಯಾಲಯ, ಕಾಲೇಜುಗಳಿಗೆ ವರ್ಗಾಯಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವೃತ್ತಿಪರ ಕೋರ್ಸ್ ಗಳಿಗೆ ಕೌನ್ಸಲಿಂಗ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ಮೇಲಿನ ಶುಲ್ಕ ಪಾವತಿಸಿದ ಬಳಿಕ ಖಾಸಗಿ ವಿಶ್ವ ವಿದ್ಯಾಲಯಗಳು ಇತರೆ ಬೇರೆ ಯಾವುದೇ ಶುಲ್ಕ ಪಡೆಯುವಂತಿಲ್ಲ.

ಪ್ರವೇಶಕಾತಿ ಪಡೆದ ವಿದ್ಯಾರ್ಥಿಗಳು ಒಂದು ವೇಳೆ ವಿದ್ಯಾಭ್ಯಾಸ ಮೊಟಕುಗೊಳಿಸಿದಲ್ಲಿ, ವಿದ್ಯಾರ್ಥಿಗಳು ಪ್ರವೇಶ ಸಂದರ್ಭದಲ್ಲಿ ಸಂಸ್ಥೆಗೆ ಸಲ್ಲಿಸಲ್ಪಟ್ಟ ಮೂಲ ದಾಖಲೆ ಹಾಗೂ ಬೋಧನಾ ಶುಲ್ಕವನ್ನು ತಕ್ಷಣವೇ ವಿಶ್ವ ವಿದ್ಯಾಲಯಗಳು ಹಿಂತಿರುಗಿಸಬೇಕು. 2021-22 ನೇ ಸಾಲಿನ ಇಂಜಿನಿಯರಿಂಗ್ ಪದವಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ನಿಗದಿಯನ್ನು ಈ ಆದೇಶದ ಅನ್ವಯ ಖಾಸಗಿ ವಿಶ್ವ ವಿದ್ಯಾಲಯಗಳು ಅನುಷ್ಠಾನ ಮಾಡಬೇಕು ಎಂದು ಸೂಚಿಸಲಾಗಿದೆ.

Higher Education Department Fixed Government Quota Seats fees for Engineering Courses

ಸರ್ಕಾರಿ ಕೋಟಾದಡಿ ಖಾಸಗಿ ವಿಶ್ವ ವಿದ್ಯಾಲಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಪ್ರವೇಶಕಾತಿ ಪಡೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಪ್ರಸಕ್ತ ಸಾಲಿನಲ್ಲಿ ಕನಿಷ್ಠ 15 ರಿಂದ 25 ರಷ್ಟು ಹೆಚ್ಚಳ ಮಾಡುವಂತೆ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ನೇತೃತ್ವದ ಕಮಿಟಿ ಶಿಫಾರಸು ಮಾಡಿತ್ತು. ಆದರೆ ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.

ಸರ್ಕಾರಿ ಕೋಟಾದಡಿ ವೃತ್ತಿಪರ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಕಳೆದ ವರ್ಷ ಇರುವ ಶುಲ್ಕವನ್ನು ಮುಂದುವರೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಅದರಂತೆ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ನಿಗದಿ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

Recommended Video

ಮಂಗಳೂರಿನಲ್ಲಿ ಪದ್ಮಶ್ರೀ ಪುರಸ್ಕೃತ ಹಾಜಬ್ಬರನ್ನು ನೋಡೋದಕ್ಕೆ ನೂಕುನುಗ್ಗಲು | Oneindia Kannada

ರಾಜ್ಯದಲ್ಲಿ ಈ ಭಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ವಿಚಾರದಲ್ಲಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಸಂಗ್ರಹಿಸಲಿದೆ. ಸ್ಕಿಲ್ ಲ್ಯಾಬ್ ಶುಲ್ಕವನ್ನು ನಿಗದಿ ಪಡಿಸಿ ವಿದ್ಯಾರ್ಥಿಗಳ ಆಯ್ಕೆಗೆ ಅವಕಾಶ ನೀಡಲಾಗಿದೆ. ಮಿಗಿಲಾಗಿ ಸಮವಸ್ತ್ರ, ಶಾಲಾ ಅಭಿವೃದ್ಧಿ ಶುಲ್ಕವನ್ನು ನಿಗದಿ ಪಡಿಸಿದ್ದು, ಅದನ್ನು ಮೀರಿ ಖಾಸಗಿ ಕಾಲೇಜುಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.

English summary
Karnataka Higher Education Department Fixed Government Quota Seats fees for Engineering Courses. Here is the detailed fee structure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X