ಬುಡಕಟ್ಟು ವಿಶ್ವವಿದ್ಯಾಲಯದ ಪ್ರಸ್ತಾವನೆ ತಿರಸ್ಕರಿಸಿದ ಶಿಕ್ಷಣ ಇಲಾಖೆ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕ ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆಯನ್ನು ಉನ್ನತ ಶಿಕ್ಷಣ ಇಲಾಖೆ ತಿರಸ್ಕರಿಸಿದೆ.
ಬುಡಕಟ್ಟು ಸಮುದಾಯಗಳ ಕುರಿತು ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಡಕಟ್ಟು ವಿಶ್ವವಿದ್ಯಾಲಯವನ್ನು ಪ್ರಸ್ತಾಪಿಸಿತ್ತು. ಆದರೆ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ (ಕೆಇಎಚ್‌ಇಸಿ) ತನ್ನ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಿತು. ಬದಲಿಗೆ, ಅಸ್ತಿತ್ವದಲ್ಲಿರುವ ಜನಪದ (ಜಾನಪದ) ವಿಶ್ವವಿದ್ಯಾಲಯದಲ್ಲಿ ಬುಡಕಟ್ಟು ಜನಾಂಗದವರಿಗೆ ಸಂಬಂಧಿಸಿದ ಕೋರ್ಸ್‌ಗಳು ಅಥವಾ ವಿಷಯಗಳನ್ನು ನೀಡಲು ನಿರ್ಧರಿಸಲಾಯಿತು.

ಬುಡಕಟ್ಟು ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸುವ ಆಲೋಚನೆಯು ಕ್ಯಾಬಿನೆಟ್ ಉಪ ಸಮಿತಿಯ ಶಿಫಾರಸುಗಳನ್ನು ಆಧರಿಸಿದೆ. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಸಂಸ್ಥಾಪಕ ಡಾ ಆರ್ ಬಾಲಸುಬ್ರಮಣ್ಯಂ ನೇತೃತ್ವದ ತಜ್ಞರ ಸಮಿತಿಯನ್ನು ಈ ಉದ್ದೇಶಕ್ಕಾಗಿ ರಚಿಸಲಾಗಿದೆ. ಆದರೆ, ಪ್ರತ್ಯೇಕ ವಿಶ್ವವಿದ್ಯಾನಿಲಯದ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟರು.
ಇದರ ಬದಲಿಗೆ ಅಸ್ತಿತ್ವದಲ್ಲಿರುವ ಯಾವುದೇ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠವನ್ನು ರಚಿಸಬಹುದು ಎಂದು ಸಮಿತಿಯು ಹೇಳಿದೆ ಎಂದು ಕೆಎಸ್‌ಇಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ. ಬುಡಕಟ್ಟು ಸಮುದಾಯಕ್ಕೆ ಶಿಕ್ಷಣದಲ್ಲಿ ಮೀಸಲಾತಿ ಮತ್ತು ಬುಡಕಟ್ಟು ಸಮುದಾಯ ಅಧ್ಯಯನ ಕೇಂದ್ರವು ಈಗಾಗಲೇ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಜ್ಞರ ಸಮಿತಿಯು ಗಮನ ಸೆಳೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
2018-19ರ ಉನ್ನತ ಶಿಕ್ಷಣದ ಅಖಿಲ ಭಾರತ ಸಮೀಕ್ಷೆಯ ಪ್ರಕಾರ ಕರ್ನಾಟಕವು 42,48,987 ಬುಡಕಟ್ಟು (ಎಸ್‌ಟಿ) ಜನಸಂಖ್ಯೆಯನ್ನು ಹೊಂದಿದೆ. ಈ ಸಮುದಾಯಕ್ಕೆ ಸೇರಿದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಸುಮಾರು 1.5 ಲಕ್ಷ ಮತ್ತು ಈ ಸಂಖ್ಯೆಗೆ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಅಗತ್ಯವಿಲ್ಲ" ಎಂದು ತಜ್ಞರ ಸಮಿತಿ ವರದಿ ಹೇಳಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಬುಡಕಟ್ಟು ಕೋರ್ಸ್‌ಗಳನ್ನು ನೀಡಲು ಜಾನಪದ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications