ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಕ್ರಮ: ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು, ಮಾ.9: ಉಕ್ರೇನ್‌ನಲ್ಲಿ ಸಿಲುಕಿರುವ ನಮ್ಮ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದ್ದು ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಕುರಿತು ಸೂಕ್ತ ಕ್ರಮವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಯುದ್ಧಪೀಡಿತ ಉಕ್ರೇನಿನಿಂದ ಸುರಕ್ಷಿತವಾಗಿ ವಾಪಸ್ ಬಂದಿರುವ ಮಲ್ಲೇಶ್ವರಂ ಕ್ಷೇತ್ರದ ನಾಲ್ವರು ವಿದ್ಯಾರ್ಥಿನಿಯರನ್ನು ಈ ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಭೇಟಿ ಮಾಡಿ, ಭರವಸೆ ತುಂಬಿದರು.

ಮಲ್ಲೇಶ್ವರದವರಾದ ಐಶ್ವರ್ಯಾ, ದಿವ್ಯಶ್ರೀ, ಲತಾಶ್ರೀ ಮತ್ತು ನಂದಿತಾ ಅವರು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಆದರೆ ಆ ರಾಷ್ಟ್ರದ ಮೇಲೆ ರಷ್ಯಾ ಯುದ್ಧ ಸಾರಿದ ಮೇಲೆ ಇವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದರು. ಕೊನೆಗೆ, ಕೇಂದ್ರ ಸರಕಾರದ ಆಪರೇಷನ್ ಗಂಗಾ ಕಾರ್ಯಾಚರಣೆಯ ಮೂಲಕ ಇವರನ್ನೆಲ್ಲ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ.

Higher Education Minister Ashwatha Narayana Meets Students Returned From Ukraine

ಬೆಂಗಳೂರನ್ನು ತಲುಪಿದ ಈ ನಾಲ್ವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರನ್ನು ಭೇಟಿಯಾದ ಸಚಿವರು, ಇವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜತೆಗೆ, ಉಕ್ರೇನಿನ ಪರಿಸ್ಥಿತಿಯ ಬಗ್ಗೆ ಕೇಳಿ, ತಿಳಿದುಕೊಂಡರು.

Higher Education Minister Ashwatha Narayana Meets Students Returned From Ukraine

ಈ ಸಂದರ್ಭದಲ್ಲಿ ಮಲ್ಲೇಶ್ವರ ಮಂಡಲದ ಬಿಜೆಪಿ ಅಧ್ಯಕ್ಷೆ ಕಾವೇರಿ ಕೇದಾರನಾಥ್ ಮುಂತಾದವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+