ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ಸಕ್ರಿಯ ಕೋವಿಡ್ ಪ್ರಕರಣದಲ್ಲಿ ಗಣನೀಯ ಇಳಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 30 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಭಾನುವಾರ ರಾಜ್ಯದಲ್ಲಿ 1,291 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿಯೂ ಗಣನೀಯ ಇಳಿಕೆಯಾಗಿದೆ.

ಸೋಮವಾರ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಡೀ ದೇಶದಲ್ಲೇ ಅತ್ಯಂತ ಹೆಚ್ಚು ಇಳಿಮುಖ ಕಂಡಿದೆ" ಎಂದು ಹೇಳಿದ್ದಾರೆ.

ಭಾರತದಲ್ಲಿ 38,772 ಹೊಸ ಕೋವಿಡ್ ಪ್ರಕರಣ ದಾಖಲು ಭಾರತದಲ್ಲಿ 38,772 ಹೊಸ ಕೋವಿಡ್ ಪ್ರಕರಣ ದಾಖಲು

ಭಾನುವಾರದ ವರದಿಯಂತೆ ಕರ್ನಾಟಕದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 8,83,899. ಸಕ್ರಿಯ ಪ್ರಕರಣಗಳ ಸಂಖ್ಯೆ 24,503. ಇವುಗಳಲ್ಲಿ ಬೆಂಗಳೂರು ನಗರದಲ್ಲಿಯೇ 18,319 ಸಕ್ರಿಯ ಪ್ರಕರಣಳಿವೆ.

ಬೆಂಗಳೂರಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 95ರಷ್ಟು ಬೆಂಗಳೂರಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ 95ರಷ್ಟು

Highest Decline In Active Covid 19 Cases Karnataka

ಒಂದು ತಿಂಗಳ ಹಿಂದೆ; ಕರ್ನಾಟಕದಲ್ಲಿ ಅಕ್ವೋಬರ್ 29ರಂದು 68,180 ಸಕ್ರಿಯ ಪ್ರಕರಣಗಳಿದ್ದವು. ನವೆಂಬರ್ 29ರ ವೇಳೆಗೆ ಸಕ್ರಿಯ ಪ್ರಕರಣಗಳು 24,776 ಆಗಿದ್ದು, ಶೇ.63.6% ರಷ್ಟು ಇಳಿಕೆಯಾಗಿದೆ.

ಹೈದರಾಬಾದ್‌ನ ಭಾರತ್ ಬಯೋಟೆಕ್ ಕೊರೊನಾ ಲಸಿಕೆ ಕೇಂದ್ರಕ್ಕೆ ಮೋದಿ ಭೇಟಿಹೈದರಾಬಾದ್‌ನ ಭಾರತ್ ಬಯೋಟೆಕ್ ಕೊರೊನಾ ಲಸಿಕೆ ಕೇಂದ್ರಕ್ಕೆ ಮೋದಿ ಭೇಟಿ

5 ರಾಜ್ಯಗಳು : ಅಕ್ಟೋಬರ್ ತಿಂಗಳಿಗೆ ಹೋಲಿಕೆ ಮಾಡಿದರೆ ನವೆಂಬರ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ ಮತ್ತು ರಾಜಸ್ಥಾನದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಅಂಕಿ ಅಂಶಗಳನ್ನು ಸಚಿವರು ಟ್ವೀಟ್ ಮಾಡಿದ್ದಾರೆ.

English summary
In a tweet Karnataka health minister Dr Sudhakar said that state has reported the highest decline in active Covid-19 cases in the past one month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X