ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ವಾರಾಂತ್ಯದಲ್ಲಿ ಭಾರಿ ಮಳೆ
ಬೆಂಗಳೂರು, ಸೆಪ್ಟೆಂಬರ್ 25: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕಲಬುರಗಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.ಮಾಹಿತಿ ನೀಡಿದೆ.
ಮುಂದಿನ ಎರಡು ದಿನ ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ ಇದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಘಾಳಕೊಲ್ಲಿಯಲ್ಲಿ ಉಮಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಸೋಮವಾರ ಕೊಪ್ಪಳ, ತುಮಕೂರು, ಬೆಂಗಳೂರು, ಮಂಡ್ಯ, ಬಳ್ಳಾರಿ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಿದೆ. ಬೆಂಗಳೂರು, ಕಲಬುರಗಿಯಲ್ಲಿ ಮಂಗಳವಾರ ಕೂಡ ಮಳೆಯಾಗಿದೆ.

48ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆಯಾಗುವ ನಿರೀಕ್ಷೆ
ಎರಡರಿಂದ ಮೂರು ದಿನಗಳ ಕಾಲ ಮಳೆ ಮುಮದುವರೆಯಲಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ 115ರಿಂದ 204 ಮಿ.ಮೀ ವರೆಗೆ ಮಳೆಯಾಗಿದೆ.

ಸೆ.25-26ರಂದು ಬೆಂಗಳೂರಲ್ಲಿ ಹೆಚ್ಚು ಮಳೆ ಮುನ್ಸೂಚನೆ
ಸೆ.25-26ರಂದು ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ 65ರಿಂದ 115 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿಯಲ್ಲಿ 151.5 ಮಿ.ಮೀ ಮಳೆ
ಕಲಬುರಗಿಯ ಅಫ್ಜಲ್‌ಪುರದಲ್ಲಿ ಸೆ.24ರ ಬೆಳಗ್ಗೆ 8.30ರಿಂದ ಸೆ.25ರ ಬೆಳಗ್ಗೆ 8.30ರವರೆಗೆ 151.5 ಮಿ.ಮೀ ಮಳೆಯಾಗಿದೆ.












Click it and Unblock the Notifications